Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೋಶಿಯಲ್ ಮೀಡಿಯಾ ಹುಚ್ಚು: 60 ಅಡಿ ಟ್ಯಾಂಕ್ ಏರಿದ ಬಾಲಕ ಸಾವು, ಇಬ್ಬರ ರಕ್ಷಣೆ
    ಇತ್ತೀಚಿನ ಸುದ್ದಿ

    ಸೋಶಿಯಲ್ ಮೀಡಿಯಾ ಹುಚ್ಚು: 60 ಅಡಿ ಟ್ಯಾಂಕ್ ಏರಿದ ಬಾಲಕ ಸಾವು, ಇಬ್ಬರ ರಕ್ಷಣೆ

    May 4, 2026
    Share

    ಉತ್ತರ ಪ್ರದೇಶ : ಇತ್ತೀಚಿನ ಸ್ಮಾರ್ಟ್​ಫೋನ್​ ಯುಗದಲ್ಲಿ ಎಲ್ಲವೂ ಆಯೋಮಯ ಅನ್ನೋದಕ್ಕೆ ಇಂತಹ ಘಟನೆಗಳೇ ಜ್ವಲಂತ ಸಾಕ್ಷಿ. ಸಾಮಾಜಿಕ ಮಾಧ್ಯಮಕ್ಕಾಗಿ ವೀಡಿಯೊ ಚಿತ್ರೀಕರಿಸಲು ಹೋಗಿ 60 ಅಡಿ ಎತ್ತರದ ನೀರಿನ ಟ್ಯಾಂಕ್ ಹತ್ತಿದ ಐವರು ಮಕ್ಕಳ ಪೈಕಿ ಓರ್ವ ಬಾಲಕ ಮೃತಪಟ್ಟು, ಉಳಿದವರು ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ನಡೆದಿದೆ.

    ಶನಿವಾರ ಮಧ್ಯಾಹ್ನ ಐವರು ಮಕ್ಕಳು ಅಪಾಯಕಾರಿ ಸಾಹಸದ ರೀಲ್ಸ್ ಮಾಡಲು ನೀರಿನ ಟ್ಯಾಂಕ್ ಹತ್ತಿದ್ದರು. ವಾಪಸ್ ಇಳಿಯುವಾಗ ಏಣಿಯು ಮುರಿದು ಬಿದ್ದ ಪರಿಣಾಮ ಮೂವರು ಮಕ್ಕಳು ಸುಮಾರು 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದರು. ಈ ಅಪಘಾತದಲ್ಲಿ 13 ವರ್ಷದ ಸಿದ್ಧಾರ್ಥ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇಬ್ಬರು ಮಕ್ಕಳು ಟ್ಯಾಂಕ್ ಮೇಲ್ಭಾಗದಲ್ಲೇ ಸಿಲುಕಿಕೊಂಡಿದ್ದರು. ಮಳೆ ಮತ್ತು ಜೌಗು ಪ್ರದೇಶದ ಕಾರಣ ಕ್ರೇನ್ ಬಳಸಲು ಸಾಧ್ಯವಾಗದಿದ್ದಾಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದಂತೆ ರಾಜ್ಯ ಸರಕಾರ ಭಾರತೀಯ ವಾಯುಪಡೆಯ ಸಹಕಾರ ಕೋರಿದೆ. ಈ ಹಿನ್ನಲೆ ಭಾರತೀಯ ವಾಯುಪಡೆಯ Mi-17 V5 ಹೆಲಿಕಾಪ್ಟರ್ ನಿಯೋಜಿಸಲಾಯಿತು. ಸುಮಾರು 16 ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ ಭಾನುವಾರ ಬೆಳಿಗ್ಗೆ 5:20ಕ್ಕೆ ಇಬ್ಬರೂ ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

    ವಿಮಾನವು ಬೆಳಗ್ಗೆ 5:20ರ ಸುಮಾರಿಗೆ ಕಾನ್ಶಿರಾಮ್ ಅವಾಸಿಯ್ ಕಾಲೋನಿಯನ್ನು ತಲುಪಿ, ಬದುಕುಳಿಯುವ ಹಂಬಲದಿಂದ ಸಹಾಯಕ್ಕಾಗಿ ಕಾದು ಕುಳಿತಿದ್ದ ಇಬ್ಬರನ್ನು ಹಗ್ಗದ ಸಹಾಯದಿಂದ ಸುರಕ್ಷಿತವಾಗಿ ರಕ್ಷಿಸಿ, ಗೋರಖ್‌ಪುರಕ್ಕೆ ವಿಮಾನದಲ್ಲಿ ಕರೆದೊಯ್ಯಲಾಯಿತು. ಈ ಘಟನೆ ಉಳಿದವರಿಗೆ ಪಾಠವಾಗಲಿ, ಇನ್ಯಾರೂ ಇಂತಹ ತಪ್ಪನ್ನು ಮಾಡದಿರಲಿ ಎಂಬುದೇ ಹೆತ್ತವರ ಕಳಕಳಿ.

    Post Views: 135

    PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.