Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಹೃದಯಾಘಾತದಿಂದ ಹುತಾತ್ಮರಾದ ಯೋಧ ಮುರಳಿಧರ್ ರೈ
    ಇತ್ತೀಚಿನ ಸುದ್ದಿ

    ಮಂಗಳೂರು : ಹೃದಯಾಘಾತದಿಂದ ಹುತಾತ್ಮರಾದ ಯೋಧ ಮುರಳಿಧರ್ ರೈ

    January 25, 2023
    Share

    ಮಂಗಳೂರು : ಸಶಸ್ತ್ರ ಸೀಮಾಬಲ್‌ನಲ್ಲಿ ಭೋಪಾಲ್‌ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್‌ ಮುರಳೀಧರ್‌ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ರವಿವಾರ ಭೋಪಾಲ್‌ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು ಕರೆದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

    ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ.

    ಊರಿಗೆ ಬರುವವರಿದ್ದರು
    ಮುರಳೀಧರ್‌ ರೈ ಅವರು 2007ರಲ್ಲಿ ಕಾನ್‌ಸ್ಟೆಬಲ್‌ ಆಗಿ ಸಶಸ್ತ್ರ ಸೀಮಾ ಬಲ್‌ಗೆ ಸೇರಿದ್ದರು. ರವಿವಾರ ರಾತ್ರಿ ವೀಡಿಯೋ ಕಾಲ್‌ ಮೂಲಕ ಪತ್ನಿ ಜತೆ ಮಾತನಾಡಿದ್ದರು. ಫೆ. 5ರಂದು ನಡೆಯಲಿದ್ದ ತಾಯಿಯ ನಿಧನದ ಮೊದಲ ವರ್ಷದ ಕಾರ್ಯಕ್ರಮಕ್ಕಾಗಿ ಎರಡು ವಾರದ ರಜೆಯಲ್ಲಿ ಮಂಗಳವಾರ ಹೊರಟು ಬುಧವಾರ ಊರಿಗೆ ಬರುವವರಿದ್ದರು. ಅವರು ಪತ್ನಿ ಹಾಗೂ ಏಳು ತಿಂಗಳ ಮಗುವನ್ನು ಅಗಲಿದ್ದಾರೆ.

    ಇಂದು ಅಂತ್ಯಸಂಸ್ಕಾರ
    ಭೋಪಾಲ್‌ನಿಂದ ವಿಮಾನದ ಮೂಲಕ ಮುರಳೀಧರ ಅವರ ಮೃತದೇಹವನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಯಿತು. ಡಿಸಿ ರವಿ ಕುಮಾರ್‌ ಎಂ.ಆರ್‌., ಜಿ.ಪಂ. ಸಿಇಒ ಡಾ| ಕುಮಾರ್‌, ಸಹಾಯಕ ಆಯುಕ್ತ ಮದನ್‌ ಮೋಹನ್‌ ಮೊದಲಾದವರು ಅಂತಿಮ ನಮನ ಸಲ್ಲಿಸಿದರು. ಮೃತದೇಹವನ್ನು ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದ್ದು ಬುಧವಾರ ಶಕ್ತಿನಗರದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.

    Post Views: 154

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.