Facebook Twitter Instagram
    Wednesday, November 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹೊಸಬೆಟ್ಟು ಸೋಮನಾಥ್ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ
    ಇತ್ತೀಚಿನ ಸುದ್ದಿ

    ಮಂಗಳೂರು: ಹೊಸಬೆಟ್ಟು ಸೋಮನಾಥ್ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ

    November 4, 2026
    Share

    ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ನಿವಾಸಿ ಸೋಮನಾಥ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಗೆ ವರ್ಗಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ ಡಾ. ಎಂ.ಎ. ಸಲೀಂ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಸುತ್ತ ಬೆಳೆದ ಗಂಭೀರ ಸ್ವರೂಪದ ಬೆಳವಣಿಗೆಗಳು ಹಾಗೂ ಸಾರ್ವಜನಿಕ ಒತ್ತಡದ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸೋಮನಾಥ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಒಟ್ಟು ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ಸಿಐಡಿ ವ್ಯಾಪ್ತಿಗೆ ವಹಿಸಲಾಗಿದೆ.

    ಸೋಮನಾಥ್ ಅವರ ಆತ್ಮಹತ್ಯೆ ಪ್ರಕರಣ: (ಸುರತ್ಕಲ್ ಠಾಣೆ).
    ದೆಹಲಿ ಮೂಲದ ಮಹಿಳೆ ನೀಡಿದ್ದ ದೂರು: (ಬೆದರಿಕೆ ಮತ್ತು ನಿಂದನೆ ಆರೋಪ).
    ಸೋಮನಾಥ್ ಪತ್ನಿ ನೀಡಿದ ದೂರು: (ಪೊಲೀಸ್ ದೌರ್ಜನ್ಯ ಹಾಗೂ ಸುಳ್ಳು ದೂರಿನ ಆರೋಪ).

    ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಸದ್ಯದ ತನಿಖಾಧಿಕಾರಿಗಳು ತಕ್ಷಣವೇ ಈ ಮೂರೂ ಪ್ರಕರಣಗಳ ಸಮಗ್ರ ಕಡತಗಳನ್ನು (Case Files) ಸಿಐಡಿ ತನಿಖಾಧಿಕಾರಿಗೆ ಹಸ್ತಾಂತರಿಸುವಂತೆ ಡಿಜಿ ಮತ್ತು ಐಜಿಪಿ ಸೂಚನೆ ನೀಡಿದ್ದಾರೆ.

    ಅಕ್ಟೋಬರ್ 25 ರಾತ್ರಿ 11 ಗಂಟೆಯ ಸುಮಾರಿಗೆ ಹೊಸಬೆಟ್ಟು ಬೀಚ್‌ಗೆ ಬಂದಿದ್ದ ದೆಹಲಿ ಮೂಲದ ಮಹಿಳೆ ಹಾಗೂ ಕೇರಳ ಮೂಲದ ಯುವಕನನ್ನು ಸೋಮನಾಥ್ ಮತ್ತಿತರರು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೆಹಲಿ ಮಹಿಳೆ ಸುರತ್ಕಲ್ ಠಾಣೆಯಲ್ಲಿ ದೂರು ನೀಡಿದ್ದರು. ಅಂದೇ ರಾತ್ರಿ ಪೊಲೀಸರು ಸೋಮನಾಥ್ ಅವರನ್ನು ಠಾಣೆಗೆ ಕರೆಸಿ ನೋಟಿಸ್ ನೀಡಿ ಕಳುಹಿಸಿದ್ದರು.
    ಠಾಣೆಗೆ ತೆರಳಿ ಬಂದ ಎರಡು ದಿನಗಳ ಬಳಿಕ, ಅಂದರೆ ಅಕ್ಟೋಬರ್ 27 ರ ಬೆಳಿಗ್ಗೆ ಸೋಮನಾಥ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. “ಪೊಲೀಸರ ಅತಿಯಾದ ದೌರ್ಜನ್ಯ ಮತ್ತು ಕಿರುಕುಳವೇ ಆತ್ಮಹತ್ಯೆಗೆ ಕಾರಣ” ಎಂದು ಆರೋಪಿಸಿ ಹೊಸಬೆಟ್ಟು ಗ್ರಾಮಸ್ಥರು ಹಾಗೂ ಸ್ಥಳೀಯರು ಮೃತದೇಹವನ್ನು ಹೆದ್ದಾರಿಯಲ್ಲಿಟ್ಟು ಭಾರಿ ಪ್ರತಿಭಟನೆ ನಡೆಸಿದ್ದರು.
    ದೆಹಲಿ ಮೂಲದ ಮಹಿಳೆ ಸುಳ್ಳು ದೂರು ನೀಡಿದ್ದಾರೆ ಹಾಗೂ ಪತಿಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಸೋಮನಾಥ್ ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣವು ದಕ್ಷಿಣಕನ್ನಡ ಜಿಲ್ಲೆಯಲ್ಲಿ ತೀವ್ರ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿರುವುದರಿಂದ, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಸಿಐಡಿಗೆ ವಹಿಸಲಾಗಿದೆ.

    Post Views: 2

    Related Posts

    ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಸಂತೋಷ್ ಬಿ.ಪಿ ಕರ್ತವ್ಯಕ್ಕೆ

    November 4, 2026

    ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ವಶಕ್ಕೆ

    November 4, 2026

    ಉಪ್ಪಿನಂಗಡಿ: ನಕ್ಸಲ್ ಚಟುವಟಿಕೆಗಳ ಆರೋಪ- ನಕ್ಸಲ್ ಲತಾ ವಶಕ್ಕೆ ಪಡೆದ ಪೊಲೀಸರು

    November 4, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಹೊಸಬೆಟ್ಟು ಸೋಮನಾಥ್ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ

    November 4, 2026

    ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಸಂತೋಷ್ ಬಿ.ಪಿ ಕರ್ತವ್ಯಕ್ಕೆ

    November 4, 2026

    ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ವಶಕ್ಕೆ

    November 4, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.