ಮಂಗಳೂರು: ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿಯನ್ನು ಹೊರ ಜಿಲ್ಲೆಗಳ ಜತೆಗೆ ಬೆಸೆಯುವ ಎಲ್ಲ ಘಾಟಿ ರಸ್ತೆಗಳಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್ಎಮ್ ಅವರಿಗೆ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದರು.
ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳು ಬೆಂಗಳೂರು ಮಂಗಳೂರು ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸದ್ದಾರೆ. ಸಂಚರಿಸಲಿರುವ ರೈಲುಗಳು : ಜುಲೈ 19ರಂದು ರೈಲು ಸಂಖ್ಯೆ 06547 ಎಸ್ಬಿಸಿ ಬೆಂಗಳೂರಿನಿಂದ ಹೊರಡಲಿದೆ. ಜುಲೈ 20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್ನಿಂದ ಯಶವಂತಪುರಕ್ಕೆ ತೆರಳಲಿದೆ. ಜುಲೈ 21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್ಗೆ ಬರಲಿದೆ. ಜುಲೈ 21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್ನಿಂದ ಯಶವಂತಪುರಕ್ಕೆ ತೆರಳಲಿವೆ.