Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮರಳು, ಕಲ್ಲು ಸಾಗಾಟದ ಟಿಪ್ಪರ್‌ಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ: ಎಸ್ಪಿ
    ಇತ್ತೀಚಿನ ಸುದ್ದಿ

    ಮರಳು, ಕಲ್ಲು ಸಾಗಾಟದ ಟಿಪ್ಪರ್‌ಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ: ಎಸ್ಪಿ

    January 8, 2026
    Share

    ಉಡುಪಿ: ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀವೇಗದಿಂದ ಚಲಾಯಿಸಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಆ ವಾಹನಗಳಿಗೆ 60 ಕಿ.ಮೀ. ವೇಗ ಮಿತಿಯ ಸ್ಪೀಡ್ ಗವರ್ನರ್(ವೇಗನಿಯಂತ್ರಕ ಕಡ್ಡಾಯವಾಗಿ ಅಳವಡಿಸುವ ಕುರಿತು ಉಡುಪಿ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರ ನಿರ್ಧಾರ ಕೈಗೊಂಡಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕ‌ರ್ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿಸಿ ಮರಳು, ಮಣ್ಣು ಕಲ್ಲು ಸೇರಿದಂತೆ ಖನಿಜಗಳನ್ನು ಸಾಗಿಸುವ ಎಲ್ಲಾ 6 ಚಕ್ರ ಮತ್ತು ಅದಕ್ಕಿಂತ ಮೇಲ್ಪಟ್ಟ ವಾಹನಗಳಿಗೆ ಗರಿಷ್ಠ 60 ಕಿ.ಮೀ ವೇಗ ಮಿತಿಯ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಈ ವಾಹನಗಳು ಅತೀಯಾದ ವೇಗ ಹಾಗೂ ನಿರ್ಲಕ್ಷತನದ ಚಾಲನೆಯಿಂದ ನಿರಂತರ ವಾಗಿ ಅಪಘಾತಗಳು ಸಂಭವಿಸುತ್ತಿದ್ದು ಆದುದರಿಂದ ಇತ್ತೀಚೆಗೆ ನಡೆದ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

    ಈ ನಿಯಮ ಪಾಲನೆಗಾಗಿ ಎಲ್ಲಾ ಲಾರಿ ಚಾಲಕ ಮಾಲಕರಿಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ. ಈ ವಿಚಾರವಾಗಿ ಚಾಲಕರಿಗೆ ಯಾವುದೇ ಮಾಹಿತಿ ಕೊರತೆಯಾಗದಂತೆ ಜಾಗೃತಿ ಮೂಡಿಸಲು ಮುಂದಿನ ದಿನಗಳಲ್ಲಿ ಕರಪತ್ರಗಳನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.

    ಅದೇ ರೀತಿ ಬಸ್‌ಗಳಲ್ಲಿ ಬಾಗಿಲು ಅಳವಡಿಕೆ ಸಂಬಂಧಿಸಿದಂತೆ ಜ.20 ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದ ನಂತರ ಬಾಗಿಲು ಇಲ್ಲದ ಬಸ್‌ಗಳಿಗೆ ದಂಡ ವಿಧಿಸಲಾಗುವುದು ಅಥವಾ ಬಸ್‌ಗಳನ್ನು ಮುಟ್ಟು ಗೋಲು ಹಾಕಿಕೊಳ್ಳಲಾಗುವುದು ಎಂದು ಎಸ್ಪಿ ಹರಿರಾಂ ಶಂಕ‌ರ್ ತಿಳಿಸಿದ್ದಾರೆ.

    Post Views: 122

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.