ಶಿವಗಿರಿ ಮಠ ವರ್ಕಲಾ, ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಇದರ ಆಶ್ರಯದಲ್ಲಿ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ, ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ, ಯತಿಪೂಜೆ ಕಾರ್ಯಕ್ರಮವು ಕೊಣಾಜೆಯ ಮಂಗಳಗಂಗೋತ್ರಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಚಿವರಾದ ದಿನೇಶ್ ಗುಂಡೂ ರಾವ್, ಸಚಿರಾದ ಝಮೀರ್ ಅಹ್ಮದ್, ಸತೀಶ್ ಜಾರಕಿಹೊಳಿ , ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ, ಕೇಂದ್ರ ಸಂಘಟನಾ ಸಮಿತಿಯ ರಕ್ಷಣಾಧಿಕಾರಿ ಶ್ರೀ ಶಿವಗಿರಿ ಮಠದ ಶ್ರೀ ಜ್ಞಾನತೀರ್ಥ ಸ್ವಾಮೀಜಿ, ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




