Facebook Twitter Instagram
    Monday, October 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾಲೇಜು ಕ್ಯಾಂಪಸ್ ಬಳಿ ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ- ಕೊಲೆ ಬೆದರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕಾಲೇಜು ಕ್ಯಾಂಪಸ್ ಬಳಿ ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ- ಕೊಲೆ ಬೆದರಿಕೆ

    October 4, 2026
    Share

    ಮಂಗಳೂರು: ಕಾಲೇಜು ಕ್ಯಾಂಪಸ್ ಬಳಿ ವಿದ್ಯಾರ್ಥಿಯೊಬ್ಬನಿಗೆ ಚೂರಿಯಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಮಂಗಳೂರಿನ ಬಳ್ಳಾಲ್‌ಭಾಗ್‌ನಲ್ಲಿ ಅ.3ರಂದು ನಡೆದಿದೆ.

    ಬಳ್ಳಾಲ್‌ಭಾಗ್‌ನ ಶ್ರೀದೇವಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿರುವ ಬೆಳ್ತಂಗಡಿ ಮೂಲದ ಮಹಮ್ಮದ್ ಉನೈಸ್ (20) ಹಲ್ಲೆಗೊಳಗಾದ ವಿದ್ಯಾರ್ಥಿ.ಅ.3ರಂದು ಬೆಳಗ್ಗೆ ಕಾಲೇಜಿನ ಸಮೀಪದ ಸಿಟಿ ಅರೇನಾ ಟರ್ಫ್‌ನಲ್ಲಿ ಕಬ್ಬಡಿ ಆಡುತ್ತಿದ್ದ ವೇಳೆ ಉನೈಸ್‌ನ ಸ್ನೇಹಿತ ರಾಯಿಝ್ ಹಾಗೂ ಶ್ರೀದೇವಿ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ಕಾಟಿಪಳ್ಳದ ರಿಯಾನ್ ನಡುವೆ ಯಾವುದೋ ವಿಚಾರಕ್ಕೆ ಜಗಳ ನಡೆದಿದೆ.

    ಈ ವೇಳೆ ಉನೈಸ್ ಸೇರಿದಂತೆ ಇತರ ವಿದ್ಯಾರ್ಥಿಗಳು ಜಗಳ ಬಿಡಿಸಲು ಮುಂದಾಗಿದ್ದು, ರಿಯಾನ್ ಉನೈಸ್‌ಗೆ ಕೈಯಿಂದ ಹೊಡೆದಿದ್ದಾನೆ ಎನ್ನಲಾಗಿದೆ.ಬಳಿಕ ಉನೈಸ್ ಕಾಲೇಜಿನ ಕ್ಯಾಂಟೀನ್ ಬಳಿ ನಿಂತಿದ್ದಾಗ ಮಧ್ಯಾಹ್ನ ಸುಮಾರು 1.45ರ ವೇಳೆಗೆ ರಿಯಾನ್ ಹಾಗೂ ಇತರ ಐವರು ಎರಡು ದ್ವಿಚಕ್ರ ವಾಹನಗಳಲ್ಲಿ ಅಲ್ಲಿಗೆ ಬಂದಿದ್ದಾರೆ.

    ಉನೈಸ್‌ನನ್ನು ಸುತ್ತುವರಿದ ಆರೋಪಿಗಳು ಏಕಾಏಕಿ ಹಲ್ಲೆ ನಡೆಸಿ, “ನಿನ್ನನ್ನು ಕೊಲೆ ಮಾಡದೇ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.ಈ ವೇಳೆ ಚೂರಿ ತೆಗೆದ ಆರೋಪಿಗಳು ಉನೈಸ್‌ನ ತಲೆ, ಬೆನ್ನು, ಎಡಕಿವಿ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಚುಚ್ಚಿ ಗಾಯಗೊಳಿಸಿದ್ದಾರೆ.

    ಗಾಯಗೊಂಡ ಉನೈಸ್ ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.ಘಟನೆಗೆ ಸಂಬಂಧಿಸಿ ಉನೈಸ್ ನೀಡಿದ ದೂರಿನ ಆಧಾರದ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 88/2026ರಂತೆ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 18

    Related Posts

    ಮಲ್ಪೆಯ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಆರೋಪಿಯ ಬಂಧನ

    October 5, 2026

    ಮಂಗಳೂರು: ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಹಲ್ಲೆ..!! ಜೀವ ಬೆದರಿಕೆ

    October 5, 2026

    ಮನೆಯ ಬಾಗಿಲು ಮುರಿದು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು!!

    October 4, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಲ್ಪೆಯ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಆರೋಪಿಯ ಬಂಧನ

    October 5, 2026

    ಮಂಗಳೂರು: ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಹಲ್ಲೆ..!! ಜೀವ ಬೆದರಿಕೆ

    October 5, 2026

    ಮನೆಯ ಬಾಗಿಲು ಮುರಿದು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು!!

    October 4, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.