ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿದೆ. ಈ ಬಳಿಕ ಅವರ ವಿರುದ್ಧ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಬರೋಬ್ಬರಿ 15 ಪ್ರಕರಣಗಳನ್ನು ದಾಖಲಿಸಿರೋದಾಗಿ ತಿಳಇದು ಬಂದಿದೆ.
ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣವನ್ನು ಬಿಜೆಪಿಯ ವಿವಿಧ ನಾಯಕರು ಖಂಡಿಸಿದ್ದಾರೆ.
ಇದೊಂದು ರಾಜಕೀಯ ಪ್ರೇರಿತ ನಡೆಯೆಂಬುದಾಗಿ ಕಿಡಿಕಾರಿದ್ದಾರೆ.
ಈ ಬೆನ್ನಲ್ಲೇ ಶ್ರೀಕಾಂತ್ ಪೂಜಾರಿ ವಿರುದ್ಧ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಕೇಸ್ ಗಳನ್ನು ದಾಖಲಿಸಲಾಗಿದೆ. ಹಳೇ ಹುಬ್ಬಳ್ಳಿ ಮತ್ತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 11 ಕೇಸ್ ದಾಖಲಾಗಿದ್ದಾವೆ.
ಇನ್ನೂ ಕಸಬಾ ಪೊಲೀಸ್ ಠಾಣೆಯಲ್ಲಿ ಶ್ರೀಕಾಂತ್ ಪೂಜಾರಿ ವಿರುದ್ಧ 3 ಕೇಸ್ ದಾಖಲಾಗಿದ್ರೇ, ಶಹರ ಪೊಲೀಸ್ ಠಾಣೆಯಲ್ಲಿ 1 ಕೇಸ್ ದಾಖಲಾಗಿದೆ.
ಶ್ರೀಕಾಂತ್ ಪೂಜಾರಿ ವಿರುದ್ಧ ಹುಬ್ಬಳ್ಳಿಯ ವಿವಿಧ ಠಾಣೆಯಲ್ಲಿ ದಾಖಲಾಗಿರುವಂತ 15 ಕೇಸ್ ಗಳಲ್ಲಿ 11 ಪ್ರಕರಣಗಳು ಅಕ್ರಮ ಸಾರಾಯಿ ಮಾರಾಟ ಕುರಿತು ದಾಖಲಾಗಿರುವಂತ ಪ್ರಕರಣಗಳಾಗಿದ್ದಾವೆ.