Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಪುತ್ತೂರು: ಪ್ರವೀಣ್ ಹತ್ಯೆ ಖಂಡಿಸಿ ಬಂದ್ -ಬಸ್‌ಗೆ ಕಲ್ಲು ತೂರಾಟ
    ಕರಾವಳಿ ಸುದ್ದಿ

    ಪುತ್ತೂರು: ಪ್ರವೀಣ್ ಹತ್ಯೆ ಖಂಡಿಸಿ ಬಂದ್ -ಬಸ್‌ಗೆ ಕಲ್ಲು ತೂರಾಟ

    July 27, 2022
    Share

    ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್(32) ಅವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಖಂಡಿಸಿ ಪುತ್ತೂರು ಬೆಳ್ಳಾರೆಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡು ಬಸ್‌ನ ಮೇಲೆ ಕಲ್ಲೆಸೆದಿರುವ ಘಟನೆ ನಡೆದಿದೆ.ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್‌‌ಆರ್‌‌ಟಿಸಿ ಬಸ್ ಮೇಲೆ ಬೊಳುವಾರಿನಲ್ಲಿ ಕಲ್ಲೆಸೆದಿದ್ದು, ಬಸ್‌ನ ಮುಂಬಾಗದ ಗಾಜು ಹುಡಿಯಾಗಿದೆ.ಇನ್ನು ಪ್ರವೀಣ್ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳೂ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಪುತ್ತೂರಿನ ವಿವೇಕಾನಂದ ಕಾಲೇಜು ಮತ್ತು ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳಿಗೆ, ಪ್ರಗತಿ ಸ್ಟಡಿ ಸೆಂಟರ್‌‌ಗೆ ರಜೆ ಘೋಷಣೆ ಮಾಡಲಾಗಿದೆ.ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರವೀಣ್ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದು, ಸರಕಾರಿ ಆಸ್ಪತ್ರೆ ಶವಾಗಾರದಲ್ಲಿ ಪ್ರವೀಣ್ ಮೃತದೇಹ ಇಡಲಾಗಿದ್ದು, ಮೆರವಣಿಗೆ ಮೂಲಕ ಮೃತದೇಹ ಸಾಗಿಸಲು ಬಿಜೆಪಿ ಕಾರ್ಯಕರ್ತರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ.ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದರು. ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ, ಬರ್ಬರವಾಗಿ ಹತ್ಯೆ ಮಾಡಿದ್ದರು. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದರು.

    Post Views: 226

    Related Posts

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.