Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೇಯಿಂಗ್ ಗೆಸ್ಟ್ , ಹಾಸ್ಟೆಲ್, ಹೋಮ್ ಸ್ಟೇ ಗಳಿಗೆ ನಿಯಮ ಕಟ್ಟುನಿಟ್ಟುಗೊಳಿಸಿದ -ಎನ್ ಶಶಿ ಕುಮಾರ್
    ಇತ್ತೀಚಿನ ಸುದ್ದಿ

    ಮಂಗಳೂರು: ಪೇಯಿಂಗ್ ಗೆಸ್ಟ್ , ಹಾಸ್ಟೆಲ್, ಹೋಮ್ ಸ್ಟೇ ಗಳಿಗೆ ನಿಯಮ ಕಟ್ಟುನಿಟ್ಟುಗೊಳಿಸಿದ -ಎನ್ ಶಶಿ ಕುಮಾರ್

    December 24, 2022
    Share

    ಮಂಗಳೂರು: ಮಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಆದೇಶ ಹೊರಡಿಸಿದ್ದಾರೆ.

    ಹಾಸ್ಟೆಲ್, ಹೋಂ ಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್‌ಮೆಂಟ್, ವಾಣಿಜ್ಯ ಉದ್ದೇಶದ ಗೆಸ್ಟ್ ಹೌಸ್, ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳ ಮಾಲಕರು/ಪಾಲುದಾರರು, ಆಡಳಿತ ಮಂಡಳಿಯ ಮುಖ್ಯಸ್ಥರು ಸಂಬಂಧಿಸಿದ ಇಲಾಖೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು.

    ಮಾಲಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಹಾಗೂ ಸಂಸ್ಥೆಯ ರಿಜಿಸ್ಟರ್ ಪುಸ್ತಕವನ್ನು ಕಡ್ಡಾಯವಾಗಿ ಪ್ರತೀ ವರ್ಷ ಪೊಲೀಸ್ ಆಯುಕ್ತರ ಕಚೇರಿಗೆ ಹಾಜರುಪಡಿಸಬೇಕು. ಅಲ್ಲದೆ ಮಾಲಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ವ್ಯಾಪ್ತಿಯ ಪೊಲೀಸ್ ಠಾಣೆಗೆ ನೀಡಬೇಕು.

    ವಿದೇಶಿ ವಿದ್ಯಾರ್ಥಿಗಳು ವಾಸ್ತವ್ಯ ಹೂಡಿದ 24 ಗಂಟೆಗಳೊಳಗೆ ಅವರ ಪೂರ್ಣ ಮಾಹಿತಿಯನ್ನು ಪಾಸ್‌ಪೋರ್ಟ್, ವೀಸಾದ ವಿವರ ಸಹಿತವಾಗಿ ನೀಡಬೇಕು. ಅವರು ವಾಸ್ತವ್ಯ ತೆರವುಗೊಳಿಸಿದಾಗಲೂ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ.

    ಉತ್ತಮ ಗುಣಮಟ್ಟದ ಸಿಸಿ ಕೆಮರಾಗಳನ್ನು ಅಳವಡಿಸಬೇಕು. ಅವುಗಳಲ್ಲಿ ಒಂದು ಕ್ಯಾಮರಾ ಮುಖ್ಯ ದ್ವಾರಕ್ಕೆ/ರಸ್ತೆಗೆ ಮುಖ ಮಾಡಿರುವಂತೆ ಅಳವಡಿಸಿರಬೇಕು. ಸಿಸಿ ಕ್ಯಾಮರಾಗಳ ಫೂಟೇಜ್‌ಗಳು ಕನಿಷ್ಠ 30 ದಿನಗಳವರೆಗೆ ವೀಕ್ಷಣೆಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಠಾಣಾಧಿಕಾರಿಗಳು ಕೇಳಿದಾಗ ಮಾಹಿತಿ ಸಲ್ಲಿಸಬೇಕು. ಅಪರಾಧದ ಕೃತ್ಯಗಳು, ಮಾದಕ ದ್ರವ್ಯ ಮತ್ತು ಅನೈತಿಕ ಹಾಗೂ ಇತರ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಎಲ್ಲಾ ಪೇಯಿಂಗ್ ಗೆಸ್ಟ್‌ಗಳಲ್ಲಿ ಮಂಗಳೂರು ನಗರ ವ್ಯಾಪ್ತಿಯ ಅತಿಥಿಗಳನ್ನು ಹೊರತುಪಡಿಸಿ ಉಳಿದ ಅತಿಥಿಗಳಿಗೆ ಅವರ ಮೂಲ ವಿಳಾಸಕ್ಕೆ ಸಂಬಂಧಿಸಿದ ಪೊಲೀಸ್ ಕಚೇರಿಯಿಂದ ಕಡ್ಡಾಯವಾಗಿ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರ ಪಡೆದುಕೊಳ್ಳಬೇಕು.

    ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಭದ್ರತೆಯ ಜವಾಬ್ದಾರಿಯನ್ನು ಸಂಬಂಧಪಟ್ಟವರು ವಹಿಸಿಕೊಂಡು ಈ ಬಗ್ಗೆ ಮುಚ್ಚಳಿಕೆ ಪ್ರಮಾಣ ಪತ್ರವನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸಬೇಕು ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

    Post Views: 214

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.