Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ; ಯುವಕನ ಬಂಧನ..!
    ಇತ್ತೀಚಿನ ಸುದ್ದಿ

    ಕಾಸರಗೋಡು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ; ಯುವಕನ ಬಂಧನ..!

    November 4, 2022
    Share

    ಕಾಸರಗೋಡು: ಜಿಲ್ಲೆಯ ಹೊಸದುರ್ಗ ಅಲಾಮಿಪಳ್ಳಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಂದ ವಿನೋದಿನಿ(20) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

    ಹೊಸದುರ್ಗ ಕಲ್ಲೂರಾವಿ ಮೌಲಕರಿಯತ್‌ ಹೌಸ್‌ನ ಎ.ಕೆ.ಅಬ್ದುಲ್‌ ಸುಹೈಬ್‌(20) ಬಂಧಿತ ಆರೋಪಿಯಾಗಿದ್ದು ಹೊಸದುರ್ಗ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆತ್ಮಹತ್ಯೆಗೆ ಪ್ರೇರಣೆ ನೀಡಿದ ಸೆಕ್ಷನ್‌ ಪ್ರಕಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪಡನ್ನಕ್ಕಾಡ್‌ ಇ.ಕೆ.ನಾಯನಾರ್‌ ಆರ್ಟ್ಸ್ ಆ್ಯಂಡ್‌ ಸಯನ್ಸ್‌ ಕಾಲೇಜು ವಿದ್ಯಾರ್ಥಿನಿಯಾಗಿದ್ದ ನಂದ ವಿನೋದಿನಿ ಅಕ್ಟೋಬರ್‌ 31 ರಂದು ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನೇಣು ಬಿಗಿಯುವ ಮುನ್ನ ವೀಡಿಯೋ ಕಾಲ್‌ ಮಾಡಿ ಅಬ್ದುಲ್‌ ಸುಹೈಬ್‌ಗ ತಿಳಿಸಿದ್ದಳೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಸೆಕ್ಷನ್‌ ಪ್ರಕಾರ ಪೊಲೀಸರು ಕೇಸು ದಾಖಲಿಸಿದ್ದರು. ಈತನನ್ನು ಸಮಗ್ರ ವಿಚಾರಣೆಗೊಳಪಡಿಸಿದ ಬಳಿಕ ಸುಹೈಬ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಂದ ವಿನೋದಿನಿ ಮತ್ತು ಅಬ್ದುಲ್‌ ಸುಹೈಬ್‌ನ ಮೊಬೈಲ್‌ ಫೋನ್‌ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ಸಮಗ್ರವಾಗಿ ಪರಿಶೀಲಿಸುತ್ತಿದ್ದಾರೆ.

    Post Views: 179

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.