Facebook Twitter Instagram
    Monday, October 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ ಸಮುದ್ರಪಾಲಾಗಿದ್ದ ವಿದ್ಯಾರ್ಥಿಯ ಶವ ಪತ್ತೆ
    ಇತ್ತೀಚಿನ ಸುದ್ದಿ

    ಉಳ್ಳಾಲ: ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ ಸಮುದ್ರಪಾಲಾಗಿದ್ದ ವಿದ್ಯಾರ್ಥಿಯ ಶವ ಪತ್ತೆ

    October 12, 2026
    Share

    ಉಳ್ಳಾಲ: ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ ಶೋಭಿತ್ ಎಂ. ಗೌಡ (18) ಅವರ ಮೃತದೇಹ ಭಾನುವಾರ ಪತ್ತೆಯಾಗಿದೆ. ಭಾಷೆಗಳನ್ನುಕಲಿಯಿರಿ

    ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿಯಾಗಿದ್ದ ಶೋಭಿತ್, ಶನಿವಾರ ಸಂಜೆ ಸ್ನೇಹಿತರೊಂದಿಗೆ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರಪಾಲಾಗಿದ್ದರು.

    ಉಜಿರೆ ಎಸ್‌ಡಿಎಂ ಕಾಲೇಜಿನ ಒಂಬತ್ತು ಮಂದಿ ವಿದ್ಯಾರ್ಥಿಗಳು ಶನಿವಾರ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಸೋಮೇಶ್ವರದ ಪೆರಿಬೈಲ್ ಬೀಚ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಶೋಭಿತ್ ಮತ್ತು ಆಕಾಶ್ ಎಂಬವರು ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದಾಗ ಏಕಾಏಕಿ ಅಪ್ಪಳಿಸಿದ ಅಲೆಗಳ ರಭಸಕ್ಕೆ ಇಬ್ಬರೂ ನೀರಿನ ಸೆಳೆತಕ್ಕೆ ಸಿಲುಕಿದ್ದರು. ಈಜು ತಿಳಿದಿದ್ದ ಆಕಾಶ್ ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದರೆ, ಶೋಭಿತ್ ಸಮುದ್ರದಲ್ಲಿ ನಾಪತ್ತೆಯಾಗಿದ್ದರು.

    ವಿದ್ಯಾರ್ಥಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿಯವರೆಗೂ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಎಸ್‌ಡಿಆರ್‌ಎಫ್, ಕರಾವಳಿ ಕಾವಲು ಪಡೆ, ಗೃಹರಕ್ಷಕ ದಳ ಹಾಗೂ ಉಳ್ಳಾಲ ಪೊಲೀಸರು ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಆದರೂ ರಾತ್ರಿ ವೇಳೆ ಶೋಭಿತ್ ಪತ್ತೆಯಾಗಿರಲಿಲ್ಲ.

    ಭಾನುವಾರವೂ ಶೋಧ ಕಾರ್ಯ ಮುಂದುವರಿದಿದ್ದು, ಮಧ್ಯಾಹ್ನದ ವೇಳೆಗೆ ಉಳ್ಳಾಲ ವಲಯ ನಾಡದೋಣಿ ಹಾಗೂ ಗಿಲೆಟ್ ಮೀನುಗಾರರ ಸಂಘದ ಪ್ರಮುಖರಾದ ಆಸಿಫ್ ಎಂ.ಬಿ., ನಿಝಾಮ್ ಕೋಟೆಪುರ, ನಝೀರ್ ಕೋಡಿ, ರಝಾಕ್ ಕೋಟೆಪುರ, ಮುಸ್ತಾಫ ಕೋಟೆಪುರ ಹಾಗೂ ಇರ್ಫಾನ್ ಕೋಟೆಪುರ ಅವರು ನಾಡದೋಣಿಯಲ್ಲಿ ಸಮುದ್ರದಲ್ಲಿ ಹುಡುಕಾಟ ನಡೆಸಿದರು. ಈ ವೇಳೆ ಉಚ್ಚಿಲ ಪೆರಿಬೈಲ್ ಸಮೀಪ ಸಮುದ್ರದಲ್ಲಿ ತೇಲುತ್ತಿದ್ದ ಶೋಭಿತ್ ಅವರ ಮೃತದೇಹ ಪತ್ತೆಯಾಗಿದೆ.

    ಮೃತದೇಹವನ್ನು ನಾಡದೋಣಿಯ ಮೂಲಕ ಕೋಟೆಪುರ ಸಮುದ್ರ ತೀರಕ್ಕೆ ತರಲಾಗಿದ್ದು, ಬಳಿಕ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

    ಮೃತ ಶೋಭಿತ್ ಕುಟುಂಬದ ಏಕೈಕ ಪುತ್ರನಾಗಿದ್ದು, ಅವರ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಪರಿಚಿತ ವಲಯದಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ

    Post Views: 6

    Related Posts

    ಮಂಗಳೂರು: ಬರ್ಬರ ಕೊಲೆ, ಶಂಕೆ ಹಿನ್ನೆಲೆ ಪತ್ನಿಯನ್ನೇ ಚುಚ್ಚಿ ಕೊಂದ ಪತಿ!

    October 12, 2026

    ಮಂಗಳೂರು, ಉಡುಪಿ ಕರಾವಳಿ ಪ್ರವಾಸ ರದ್ದುಗೊಳಿಸಿದ ಸಿಎಂ ಡಿ. ಕೆ. ಶಿವಕುಮಾರ್

    October 11, 2026

    ಉಡುಪಿ: ವೃದ್ಧೆಯ ಚಿನ್ನದ ಸರ ದರೋಡೆ ಪ್ರಕರಣ- ಇಬ್ಬರ ಬಂಧನ

    October 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಬರ್ಬರ ಕೊಲೆ, ಶಂಕೆ ಹಿನ್ನೆಲೆ ಪತ್ನಿಯನ್ನೇ ಚುಚ್ಚಿ ಕೊಂದ ಪತಿ!

    October 12, 2026

    ಉಳ್ಳಾಲ: ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ ಸಮುದ್ರಪಾಲಾಗಿದ್ದ ವಿದ್ಯಾರ್ಥಿಯ ಶವ ಪತ್ತೆ

    October 12, 2026

    ಮಂಗಳೂರು, ಉಡುಪಿ ಕರಾವಳಿ ಪ್ರವಾಸ ರದ್ದುಗೊಳಿಸಿದ ಸಿಎಂ ಡಿ. ಕೆ. ಶಿವಕುಮಾರ್

    October 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.