Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»SHOCKING NEWS: ಅಂಕಪಟ್ಟಿ ಕೊಡಲು ವಿಳಂಬ ಮಾಡಿದ್ಕೆ ಬೆಂಕಿ ಹಚ್ಚಿ ಪ್ರಾಂಶುಪಾಲರನ್ನೇ ಕೊಂದ ವಿದ್ಯಾರ್ಥಿ
    ಇತ್ತೀಚಿನ ಸುದ್ದಿ

    SHOCKING NEWS: ಅಂಕಪಟ್ಟಿ ಕೊಡಲು ವಿಳಂಬ ಮಾಡಿದ್ಕೆ ಬೆಂಕಿ ಹಚ್ಚಿ ಪ್ರಾಂಶುಪಾಲರನ್ನೇ ಕೊಂದ ವಿದ್ಯಾರ್ಥಿ

    February 25, 2023
    Share

    ಮಧ್ಯಪ್ರದೇಶ: ಅಂಕಪಟ್ಟಿ ಕೊಡಲು ವಿಳಂಬ ಮಾಡಿದ್ರು ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಮಹಿಳಾ ಪ್ರಾಂಶುಪಾಲರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.

    ಫೆಬ್ರವರಿ 20 ರಂದು ಬಿಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ವಿಮುಕ್ತ ಶರ್ಮಾ ಮೇಲೆ ಮಾಜಿ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ (24) ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ.

    ಈ ವೇಳೆ, ವಿಮುಕ್ತಾರ ದೇಹ ಶೇ. 90ರಷ್ಟು ಸುಟ್ಟ ಗಾಯಗಳಾಗಿತ್ತು. ಕೂಡಲೇ ಅವರನ್ನು ಚೋಯಿತ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ವಿಮುಕ್ತ ಇಂದು (ಶನಿವಾರ) ಮುಂಜಾನೆ 4 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅವರ ಸಹೋದರ ಅರವಿಂದ್ ತಿವಾರಿ ತಿಳಿಸಿದ್ದಾರೆ.

    ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಏತನ್ಮಧ್ಯೆ, ಇಂದೋರ್ ಆಡಳಿತವು ಅಶುತೋಷ್ ಶ್ರೀವಾಸ್ತವ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಮೂಲಕ ವಿಚಾರಣೆ ಪ್ರಾರಂಭಿಸಿದೆ.

    ‘ತನಿಖೆಯ ಸಮಯದಲ್ಲಿ, ಶ್ರೀವಾಸ್ತವ ವಿರುದ್ಧ ಫಾರ್ಮಸಿ ಕಾಲೇಜು ಅಧಿಕಾರಿಗಳು, ಮಹಿಳಾ ಪ್ರಾಂಶುಪಾಲರು ಮತ್ತು ಇತರ ಸಿಬ್ಬಂದಿ ಆರೋಪಿಗಳು ಆತ್ಮಹತ್ಯೆ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ಎರಡು ಮೂರು ದೂರುಗಳನ್ನು ನೀಡಿರುವುದು ನಮಗೆ ಕಂಡುಬಂದಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಭಗವತ್ ಸಿಂಗ್ ವಿರ್ಡೆ ಪಿಟಿಐಗೆ ತಿಳಿಸಿದ್ದಾರೆ.

    Post Views: 226

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.