Facebook Twitter Instagram
    Monday, October 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು
    ಇತ್ತೀಚಿನ ಸುದ್ದಿ

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026
    Share

    ನಲ್ಗೊಂಡ : ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿ ಮಂಡಲ ಕೇಂದ್ರದಲ್ಲಿರುವ ನಾಗಾರ್ಜುನ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಕೆ. ರೂಪಾ ರೆಡ್ಡಿ ಅವರ ಹತ್ಯೆ ಪ್ರಕರಣದಲ್ಲಿ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದ್ದು, ಅವರು ನಡೆಸುತ್ತಿದ್ದ ಶಾಲೆಯ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳೇ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

    ವರ್ಗಾವಣೆ ಪ್ರಮಾಣಪತ್ರ (TC) ನೀಡಿ ಶಾಲೆಯಿಂದ ವಜಾಗೊಳಿಸಿದ್ದಕ್ಕಾಗಿ ಆಕ್ರೋಶಗೊಂಡಿದ್ದ ವಿದ್ಯಾರ್ಥಿ, ರೂಪಾ ರೆಡ್ಡಿ ಅವರ ವಿರುದ್ಧ ತೀವ್ರ ದ್ವೇಷ ಹೊಂದಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
    ಅಗಸ್ಟ್ 11 ರಂದು ಮುಖವಾಡ ಹಾಗೂ ಹೂಡಿ ಧರಿಸಿದ್ದ ಇಬ್ಬರು ವಿದ್ಯಾರ್ಥಿಗಳು ರೂಪಾ ರೆಡ್ಡಿ ಅವರ ಮನೆಗೆ ತೆರಳಿದ್ದರು. ಒಬ್ಬ ವಿದ್ಯಾರ್ಥಿ ಮನೆಗೆ ನುಗ್ಗಿ ಹಣ ನೀಡುವಂತೆ ಬೆದರಿಕೆ ಹಾಕಿದಾಗ ಪ್ರಾಂಶುಪಾಲೆ ವಿರೋಧಿಸಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಮುಖವಾಡ ಕಳಚಿ ಬಿದ್ದಾಗ, ವಿದ್ಯಾರ್ಥಿಯನ್ನು ಗುರುತಿಸಿದ ರೂಪಾ ರೆಡ್ಡಿ ಕಿರುಚಾಡಿದ್ದಾರೆ. ತನ್ನ ಗುರುತು ಸಿಕ್ಕಿಬೀಳುವ ಭಯದಿಂದ ವಿದ್ಯಾರ್ಥಿಯು ತಂದಿದ್ದ ಚಾಕುವಿನಿಂದ ಆಕೆಗೆ ಇರಿದು ಕೊಲೆ ಮಾಡಿದ್ದಾನೆ.

    ಕೊಲೆಯ ನಂತರ ಮನೆಯಲ್ಲಿದ್ದ ₹2.20 ಲಕ್ಷ ನಗದನ್ನು ದೋಚಿದ ಆರೋಪಿ, ಹೊರಗಡೆ ಕಾಯುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿಗೆ ₹40,000 ನೀಡಿದ್ದಾನೆ. ತನಿಖೆ ಕೈಗೆತ್ತಿಕೊಂಡ ಪೊಲೀಸರು, ಶಂಕಿತ ವಿದ್ಯಾರ್ಥಿಯ ಜೇಬಿನಲ್ಲಿದ್ದ ರಕ್ತದ ಕಲೆಯಾಗಿದ್ದ ₹1.60 ಲಕ್ಷ ನಗದನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದಾಗ ಇಬ್ಬರೂ ಸತ್ಯ ಒಪ್ಪಿಕೊಂಡಿದ್ದಾರೆ. ಇಬ್ಬರು ಬಾಲಕರನ್ನು ಪೊಲೀಸರು ಪ್ರಸ್ತುತ ವಶಕ್ಕೆ ಪಡೆದಿದ್ದಾರೆ.

    Post Views: 199

    CrimeNews PoliceInvestigation

    Related Posts

    ಮನೆಯ ಬಾಗಿಲು ಮುರಿದು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು!!

    October 4, 2026

    ಮನೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ!! ಪ್ರಕರಣ ದಾಖಲು

    October 4, 2026

    ಮಂಗಳೂರು: ಕಾಲೇಜು ಕ್ಯಾಂಪಸ್ ಬಳಿ ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ- ಕೊಲೆ ಬೆದರಿಕೆ

    October 4, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮನೆಯ ಬಾಗಿಲು ಮುರಿದು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು!!

    October 4, 2026

    ಮನೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ!! ಪ್ರಕರಣ ದಾಖಲು

    October 4, 2026

    ಮಂಗಳೂರು: ಕಾಲೇಜು ಕ್ಯಾಂಪಸ್ ಬಳಿ ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ- ಕೊಲೆ ಬೆದರಿಕೆ

    October 4, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.