Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಡು ರಸ್ತೆಯಲ್ಲೇ ಸಬ್‌ ಇನ್ಸ್‌ ಪೆಕ್ಟರ್‌ಗೆ ಥಳಿತ- ಹೆದರಿ ಓಡಿದ ಜೊತೆಗಿದ್ದ ಪೊಲೀಸರು
    ಇತ್ತೀಚಿನ ಸುದ್ದಿ

    ನಡು ರಸ್ತೆಯಲ್ಲೇ ಸಬ್‌ ಇನ್ಸ್‌ ಪೆಕ್ಟರ್‌ಗೆ ಥಳಿತ- ಹೆದರಿ ಓಡಿದ ಜೊತೆಗಿದ್ದ ಪೊಲೀಸರು

    November 1, 2023
    Share

    ಲಕ್ನೋ: ಗುಂಪೊಂದು ಸಬ್‌ ಇನ್ಸ್ ಪೆಕ್ಟರ್‌ ನ್ನು ರಸ್ತೆಯಲ್ಲೇ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಸೋಮವಾರ(ಅ.31 ರಂದು) ನಡೆದಿದೆ.

    ಯುಪಿ ಪೊಲೀಸ್‌ನ ಸಬ್-ಇನ್ಸ್‌ಪೆಕ್ಟರ್ (ಎಸ್‌ಐ) ರಾಮ್ ಅವತಾರ್ ಅವರಿಗೆ ಗುಂಪೊಂದು ಥಳಿಸಿರುವ ಘಟನೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

    ಘಟನೆ ಹಿನ್ನೆಲೆ: ಮಹೋಬಾದ ಪನ್ವಾರಿ ಪ್ರದೇಶದಲ್ಲಿ 13 ವರ್ಷದ ಬಾಲಕ ಬಸ್ಸಿನಡಿ ಸಿಲುಕಿ ಸಾವನ್ನಪ್ಪಿದ್ದ. ಇದಕ್ಕೆ ಸಂಬಂಧಿಸಿ ಮೃತನ ಬಾಲಕನ ಸಂಬಂಧಿಗಳು ಹಾಗೂ ಕೆಲ ಸ್ಥಳೀಯರು ರಸ್ತೆಯಲ್ಲಿ ನಿಂತು ಚಾಲಕನ ವಿರುದ್ಧ ಕ್ರಮಕ್ಕೆ ಹಾಗೂ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯ ಕಾರಣದಿಂದ ರಸ್ತೆಯಲ್ಲಿ ಸಂಚಾರ ದಟ್ಟನೆ ಉಂಟಾಗಿತ್ತು. ಇದರಿಂದ ಟ್ರಾಫಿಕ್‌ ಕ್ಲಿಯರ್‌ ಮಾಡಲು ಸ್ಥಳಕ್ಕೆ ಸಬ್-ಇನ್ಸ್‌ಪೆಕ್ಟರ್ ರಾಮ್ ಅವತಾರ್ ತನ್ನ ತಂಡದೊಂದಿಗೆ ಆಗಮಿಸಿದ್ದರು.

    ಈ ವೇಳೆ ಎಸ್‌ ಐ ಹಾಗೂ ಮೃತ ಬಾಲಕನ ಸಂಬಂಧಿಕರ ನಡುವ ಮಾತಿನ ಚಕಮಕಿ ಉಂಟಾಗಿದ್ದು, ಮೊದಲೇ ಸಿಟ್ಟಾಲಿದ್ದ ಜನ ಸಬ್-ಇನ್ಸ್‌ಪೆಕ್ಟರ್ ರಾಮ್ ಅವತಾರ್ ಅವರ ಮೇಲೆ ಹಲ್ಲೆ ಮಾಡಲು ಶುರು ಮಾಡಿದ್ದಾರೆ. ರಾಮ್‌ ಅವತಾರ್‌ ಅವರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಒದ್ದು, ಕೋಲುಗಳಿಂದ ಹಲ್ಲೆ ಮಾಡಿದ್ದಾರೆ.

    ಘಟನಾ ಸ್ಥಳದಲ್ಲಿದ್ದ ಇತರ ಮೂವರು ಪೊಲೀಸರು ಅಲ್ಲಿಂದ ಓಡಿಹೋಗಿದ್ದಾರೆ. ಇದಾದ ಬಳಿಕ ಘಟನಾ ಸ್ಥಳಕ್ಕೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಮತ್ತು ಪ್ರದೇಶದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಸ್ಥಳಕ್ಕೆ ಆಗಮಿಸಿ ಗುಂಪನ್ನು ಶಾಂತಗೊಳಿಸಿದ್ದಾರೆ. ನಂತರ ರಾಮ್ ಅವತಾರ್ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಈ ಸಂಬಂಧ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಇಬ್ಬರು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ವರದಿ ತಿಳಿಸಿದೆ.

    Post Views: 255

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.