Facebook Twitter Instagram
    Friday, October 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ  ನೀರಿಗಿಳಿದ ಇಬ್ಬರು ಯುವಕರ ದುರ್ಮರಣ
    ಇತ್ತೀಚಿನ ಸುದ್ದಿ

    ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ  ನೀರಿಗಿಳಿದ ಇಬ್ಬರು ಯುವಕರ ದುರ್ಮರಣ

    January 19, 2026
    Share

    ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ

    . ಮೃತಪಟ್ಟವರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (40) ಮತ್ತು ಸುಜೀತ್ ಗೋಳಿಯಾಡಿ (26) ಎಂದು ಗುರುತಿಸಲಾಗಿದೆ. ಇಬ್ಬರೂ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಹರಿಪ್ರಸಾದ್ ಅವರು ಸುಬ್ರಹ್ಮಣ್ಯದಲ್ಲಿ ‘ಅನುಗ್ರಹ ಎಂಟರ್‌ಪ್ರೈಸಸ್’ ಎಂಬ ಹಾರ್ಡ್‌ವೇ‌ರ್ ಅಂಗಡಿಯ ಮಾಲೀಕರಾಗಿದ್ದರು, ಸುಜೀತ್ ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.

    ರವಿವಾರ ಮಧ್ಯಾಹ್ನ ಹರಿಪ್ರಸಾದ್ ಮತ್ತು ಸುಜೀತ್ ಅವರು ತಮ್ಮ ಪರಿಚಿತರಾದ ಸುಮಾರು 10 ಜನರ ತಂಡದೊಂದಿಗೆ ಕಾಲೋನಿ ಕೊನೆಯಲ್ಲಿರುವ ಕುಮಾರಧಾರ ನದಿಯ ಬಳಿ ವನಭೋಜನಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಕುಲ್ಕುಂದ ಬಳಿ ನದಿಯಲ್ಲಿ ಸ್ನಾನ ಮಾಡಲು ನೀರಿಗಿಳಿದಾಗ ಇಬ್ಬರೂ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ.

    ಜೊತೆಯಲ್ಲಿದ್ದವರು ತಕ್ಷಣವೇ ಗಮನಿಸಿದರೂ ಫಲಕಾರಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ. ಬಳಿಕ ನೀರಿನಲ್ಲಿ ಮುಳುಗಿದ್ದ ಇಬ್ಬರ ಮೃತದೇಹಗಳನ್ನು ಮೇಲೆತ್ತಲಾಗಿದೆ. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 222

    Related Posts

    ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳಿಗೆ ಬೆದರಿಕೆ-ಆರೋಪಿಯ ಬಂಧನ

    October 23, 2026

    “ಬನ ಸಿನಿಮಾ ತುಳುನಾಡಿಗೆ ಕೀರ್ತಿ ತರುವ ಕೆಲಸ ಮಾಡಲಿ“ -ಐವನ್ ಡಿಸೋಜ

    October 23, 2026

    ಮಂಗಳೂರು: ಫ್ಲ್ಯಾಟ್ ನೀಡದೆ ಜಾಗದ ಮಾಲೀಕರಿಗೆ ವಂಚನೆ ಆರೋಪ-ಬಿಲ್ಡರ್ ಡೊನಾಲ್ಡ್ ಪಿಂಟೋ ವಿರುದ್ಧ ಕೇಸ್ ದಾಖಲು

    October 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳಿಗೆ ಬೆದರಿಕೆ-ಆರೋಪಿಯ ಬಂಧನ

    October 23, 2026

    “ಬನ ಸಿನಿಮಾ ತುಳುನಾಡಿಗೆ ಕೀರ್ತಿ ತರುವ ಕೆಲಸ ಮಾಡಲಿ“ -ಐವನ್ ಡಿಸೋಜ

    October 23, 2026

    ಮಂಗಳೂರು: ಫ್ಲ್ಯಾಟ್ ನೀಡದೆ ಜಾಗದ ಮಾಲೀಕರಿಗೆ ವಂಚನೆ ಆರೋಪ-ಬಿಲ್ಡರ್ ಡೊನಾಲ್ಡ್ ಪಿಂಟೋ ವಿರುದ್ಧ ಕೇಸ್ ದಾಖಲು

    October 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.