ಮೂಡುಬಿದಿರೆ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೇ ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗುರುವಾರ ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಂಗಳೂರಿನ ಕೋಟೆಕಾರ್ ನಿವಾಸಿ ಅಬ್ಬಾಸ್ (50) ಎಂದು ಗುರುತಿಸಲಾಗಿದೆ. ಈತನ ಬಳಿಯಿದ್ದ ಪೊಲೀಸರು ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು (ಕ್ರೈಂ ನಂ: 45/2026), ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8(ಸಿ) ಮತ್ತು 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಪಣಂಬೂರು ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ತಂಡ ಮತ್ತು ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.




