Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: 11 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
    ಇತ್ತೀಚಿನ ಸುದ್ದಿ

    ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: 11 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

    November 1, 2025
    Share

    ಹಿಂದೂ ಪರ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು 11 ಆರೋಪಿಗಳ ವಿರುದ್ಧ ಬೆಂಗಳೂರು ಎನ್‌ಐಎ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

    ದೇಶದ್ರೋಹ ಕಾಯ್ದೆ ಸೇರಿದಂತೆ ವಿವಿಧ ಕಾಯಿದೆಗಳಡಿ ಪ್ರಕರಣ ದಾಖಲಾಗಿದ್ದು, ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.  2025ರ ಮೇ 1ರಂದು ಸುಹಾಸ್ ಶೆಟ್ಟಿಯನ್ನು ಬಜ್ಜೆಯಲ್ಲಿ ನಡುರಸ್ತೆಯಲ್ಲಿ ಕೊಲೆ ಮಾಡಲಾಗಿತ್ತು.

    ಹಲವು ಸಮಯದಿಂದ ಹೊಂಚು ಹಾಕಿ ಜನರಲ್ಲಿ ಭಯ ಮೂಡಿಸುವುದಕ್ಕಾಗಿಯೇ ಈ ರೀತಿ ಭಯಾನಕವಾಗಿ ಕೊಲೆ ಮಾಡಲಾಗಿತ್ತು ಎಂದು ಎನ್‌ಐಎ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ.

    ಸುಹಾಸ್ ಶೆಟ್ಟಿ ಕೊಲೆ ನಡೆಸುವುದಕ್ಕಾಗಿ ನಿಷೇಧಿತ ಪಿಎಫ್‌ಐ ಸಂಘಟನೆಯ ಮಾಜಿ ಸದಸ್ಯ ಅಬ್ದುಲ್ ಸಫಾನ್ ಎಂಬಾತ ನಿಯಾಜ್, ಮುಹಮ್ಮದ್ ಮುಸಾಮಿರ್, ಮಹಮ್ಮದ್ ಮುಜಾಮಿಲ್, ಇನ್ನೊಬ್ಬ ಪಿಎಫ್‌ಐ ಸದಸ್ಯ ವಾಮಂಜೂರು ನೌಶಾದ್ ಮತ್ತು ಆದಿಲ್ ಮಹರೂಫ್ ಜೊತೆಗೂಡಿ ಸಂಚು ನಡೆಸಿದ್ದರು. ಕೃತ್ಯ ನಡೆಸುವುದಕ್ಕಾಗಿ ಆದಿಲ್ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿದ್ದ ಎಂದು ಎನ್‌ಐಎ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

    ಚಿಕ್ಕಮಗಳೂರು ಮೂಲದ ಕಲಂದರ್ ಶಾಫಿ, ರಂಜಿತ್, ನಾಗರಾಜ, ಮಹಮ್ಮದ್ ರಿಜ್ವಾನ್, ಅಜರುದ್ದೀನ್, ಅಬ್ದುಲ್ ಖಾದರ್ ಅವರನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿ ಆರೋಪ ಹೊರಿಸಲಾಗಿದೆ. ಇನ್ನೊಬ್ಬ ಆರೋಪಿ ಅಬ್ದುಲ್ ರಜಾಕ್ ಬಗ್ಗೆ ತನಿಖೆ ನಡೆಯುತ್ತಿದ್ದು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಕೋರ್ಟಿಗೆ ಎನ್‌ಐಎ ತಿಳಿಸಿದೆ.

    Post Views: 129

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.