Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!!
    ಇತ್ತೀಚಿನ ಸುದ್ದಿ

    ಉಳ್ಳಾಲ: ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    December 12, 2024
    Share

    ಉಳ್ಳಾಲ: ಇಲ್ಲಿನ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಪಾದರಕ್ಷೆ, ಕೂಲಿಂಗ್ ಗ್ಲಾಸ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸಮುದ್ರದಲ್ಲಿ ಪತ್ತೆಯಾಗಿದೆ.

    ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತಪಟ್ಟ ವ್ಯಕ್ತಿ. ಉದಯ್ ಕುಮಾರ್ ಬುಧವಾರ ಮಧ್ಯಾಹ್ನ ಸೋಮೇಶ್ವರ ಸೋಮನಾಥ ಕ್ಷೇತ್ರದ ಮುಂಭಾಗ ತನ್ನ ಸ್ಕೂಟರ್ ನಿಲ್ಲಿಸಿ ಸಮುದ್ರ ತೀರದ ರುದ್ರಪಾದೆಯತ್ತ ತೆರಳಿದ್ದಾರೆ. ಬಳಿಕ ರುದ್ರಪಾದೆಯಲ್ಲಿ ಪರ್ಸ್, ಪಾದರಕ್ಷೆ, ಕೂಲಿಂಗ್ ಗ್ಲಾಸ್ ಇಟ್ಟು ನಾಪತ್ತೆಯಾಗಿದ್ದರು. ಬೀಚ್‌ನಲ್ಲಿ ಸುತ್ತಾಡುತ್ತಿದ್ದ ಹುಡಗನೊಬ್ಬ ರುದ್ರಪಾದೆಯಲ್ಲಿದ್ದ ಪರ್ಸ್‌ಅನ್ನು ಸ್ಥಳೀಯ ಗೂಡಂಗಡಿಯವರಿಗೆ ನೀಡಿದ್ದಾನೆ. ಅವರು ಪೊಲೀಸರಿಗೆ ಈ ವಿಚಾರ ತಿಳಿಸಿದ್ದಾರೆ.

    ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಉದಯ್‌ರನ್ನು ಸಮುದ್ರದಲ್ಲಿ ರಬ್ಬರ್ ಟ್ಯೂಬ್ ಮೂಲಕ ಶೋಧಿಸಿದ್ದಾರೆ. ಸಂಜೆ ವೇಳೆ ಸೋಮೇಶ್ವರ ಕಡಲ ಕಿನಾರೆಯ ಅಲಿಮಕಲ್ಲು ಎಂಬಲ್ಲಿ ಉದಯ್ ಕುಮಾರ್ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಮೃತದೇಹವನ್ನು ಎಳೆದು ಮೇಲಕ್ಕೆ ಹಾಕಿದ್ದಾರೆ.

    ಮೇಲ್ನೋಟಕ್ಕೆ ಉದಯ್ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದ್ದು ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಹಾಕ್ ಆಸ್ಪತ್ರೆಗೆ ಒಯ್ದಿದ್ದಾರೆ. ಮೃತ ಉದಯ್ ಅವರು ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿದ್ದರು. ಮೃತರು ತಂದೆ, ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ.

    Post Views: 319

    Related Posts

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.