Facebook Twitter Instagram
    Sunday, June 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪತ್ನಿಯನ್ನು ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ!!
    ಇತ್ತೀಚಿನ ಸುದ್ದಿ

    ಪತ್ನಿಯನ್ನು ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ!!

    January 18, 2025
    Share

    ಸುಳ್ಯ: ಪತಿಯು ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಭೀಕರ ಘಟನೆ ಸುಳ್ಯ ತಾಲೂಕಿನ ದೊಡ್ಡತೋಟ ಸಮೀಪದ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಜ 17ರ ತಡ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

    ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ರಾಮಚಂದ್ರ ಎಂಬಾತ ಕೊಲೆ ಆರೋಪಿ. ಆತನ ಪತ್ನಿ ವಿನೋದ ಹತ್ಯೆಯಾದವರು. ರಾಮಚಂದ್ರ ಪತ್ನಿಯನ್ನು ಕೋವಿಯಿಂದ ಗುಂಡಿಕ್ಕಿ ಕೊಂದು ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.

    ವಿನೋದವರಿಗೆ 43 ವರ್ಷವಾಗಿದ್ದು, ರಾಮಚಂದ್ರಗೆ 54 ವರ್ಷ ವಯಸ್ಸಾಗಿತ್ತು.ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದೆ

    ನಿನ್ನೆ ರಾತ್ರಿ ಮದ್ಯ ಸೇವಿಸಿ ಬಂದು 10 ಗಂಟೆಯ ನಂತರ ಪತ್ನಿ ವಿನೋದ ಹಾಗೂ ಪುತ್ರ ಪ್ರಶಾಂತ್‌ರೊಡನೆ ರಾಮಚಂದ್ರ ಗೌಡರು ಜಗಳ ಆರಂಭಿಸಿದ್ದಾರೆ. ಈ ರೀತಿ ಜಗಳವಾಡುವುದನ್ನು ಹಿರಿಮಗ ಪ್ರಶಾಂತ್ ವಿರೋಧಿಸಿದ್ದಾನೆ. ಆಗ ರಾಮಚಂದ್ರ ಗೌಡರು ಮನೆಯಲ್ಲಿದ್ದ ಕೋವಿ ಎತ್ತಿಕೊಂಡು, ಮಗನಿಗೆ ಗುಂಡಿಕ್ಕಲು ಬಂದಿದ್ದಾರೆ.

    ಇದನ್ನು ಕಂಡ ಪತ್ನಿ ವಿನೋದರವರು ಅಡ್ಡ ಬಂದು ಗಂಡನನ್ನು ತಡೆಯಲು ಪ್ರಯತ್ನಿಸಿದಾಗ ರಾಮಚಂದ್ರ ಗೌಡರು ಹಾರಿಸಿದ ಗುಂಡು ವಿನೋದ‌ ಅವರಿಗೆ ತಾಗಿ ಮೃತಪಟ್ಟಿದ್ದಾರೆ. ಬಳಿಕ ರಾಮಚಂದ್ರ ಗೌಡರು ಯಾವುದೋ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ‌ ಪ್ರಕರಣ ದಾಖಲಿಸಿದ್ದಾರೆ.

    Post Views: 280

    Related Posts

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.