Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಕುಂದಾಪುರ: ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ನದಿಯಲ್ಲಿ ಪತ್ತೆ
    ಕರಾವಳಿ ಸುದ್ದಿ

    ಕುಂದಾಪುರ: ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

    May 7, 2023
    Share

    ಕುಂದಾಪುರ: ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಗೆ ಸ್ನೇಹಿತರೊಂದಿಗೆ ಜಲಕ್ರೀಡೆಯಾಡಲೆಂದು ಹೋಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಶನಿವಾರ ಪತ್ತೆಯಾಗಿದೆ.

    ಸುಳ್ಯದ ನಿವಾಸಿ ಸುಹಾಸ್ ಎಂ (21) ಮೃತ ಯುವಕ.ಮೇ 5 ರಂದು ಸೌಡ ಸಮೀಪದ ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಆಕಸ್ಮಿಕವಾಗಿ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಜೊತೆಗಿದ್ದ ಯುವಕರು ತಕ್ಷಣ ಸ್ಥಳೀಯರಿಗೆ ಸುದ್ಧಿ ತಲುಪಿಸಿ ಹುಡುಕಾಟ ಆರಂಭಿಸಿದ್ದಾರೆ.ಇನ್ನು ಶನಿವಾರ ಬೆಳಗ್ಗೆ ಸುಹಾಸ್ ಮೃತದೇಹ ಮುಳುಗಿದ ಸ್ಥಳದಿಂದ ಸುಮಾರು 200 ಮೀಟರ್ ದೂರದಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕೋಟ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

    ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಬೆಳಿಗ್ಗೆಯಷ್ಟೇ ತನ್ನ ಮನೆಯಾದ ಐವರ್ನಾಡಿನ ಮಡ್ತಿಲದಿಂದ ಮೂಡಬಿದ್ರೆಗೆ ಬಂದಿದ್ದ. ಅಲ್ಲಿಂದ ಸ್ನೇಹಿತರೊಂದಿಗೆ ಸೌಡ ಹೊಳೆಗೆ ಆಟವಾಡಲು ಬಂದಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 173

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.