Facebook Twitter Instagram
    Friday, October 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..!!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..!!

    January 14, 2026
    Share

    ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಪ್ರದೇಶದಿಂದ ಮುಂಜಾನೆ 4 ಗಂಟೆ ಸುಮಾರಿಗೆ ನಾಪತ್ತೆಯಾದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. 

    ಮೃತ ಬಾಲಕನನ್ನು ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂದು ಗುರುತಿಸಲಾಗಿದೆ.  ಸುಮಂತ್ ಸೇರಿದಂತೆ ಮೂವರು ಬಾಲಕರು ಪ್ರತಿದಿನ ಮುಂಜಾನೆ 4 ಗಂಟೆ ಸುಮಾರಿಗೆ ಬೆಳ್ತಂಗಡಿ ಕಳಿಯ ಗ್ರಾಮದ ನಾಳ ದೇವಸ್ಥಾನದಲ್ಲಿ ನಡೆಯುವ ಧನುಪೂಜೆಗೆ ತೆರಳುತ್ತಿದ್ದರು.

    ಇಂದು(ಜ.14) ಮುಂಜಾನೆ 4 ಗಂಟೆ ಸುಮಾರಿಗೆ ಸುಮಂತ್ ಮನೆಯಿಂದ ಹೊರಟಿದ್ದನು. ಆದರೆ ಆತ ನಿರ್ದಿಷ್ಟ ಸಮಯಕ್ಕೆ ದೇವಸ್ಥಾನಕ್ಕೆ ತಲುಪದ ಕಾರಣ ಇತರ ಇಬ್ಬರು ಬಾಲಕರು ಆತನಿಗಾಗಿ ಕಾಯದೆ ದೇವಸ್ಥಾನಕ್ಕೆ ತೆರಳಿದ್ದರು. ನಂತರ ಸಂಶಯಗೊOಡ ಬಾಲಕರು ಸುಮಂತ್ ಮನೆಯವರಿಗೆ ಕರೆ ಮಾಡಿದಾಗ, ಆತ ಮುಂಜಾನೆಯೇ ದೇವಸ್ಥಾನಕ್ಕೆ ಹೋಗಿದ್ದಾನೆ ಎಂದು ಮನೆಯವರು ತಿಳಿಸಿದ್ದಾರೆ.

    ಆದರೆ ಸುಮಂತ್ ದೇವಸ್ಥಾನಕ್ಕೆ ಬಂದಿಲ್ಲ ಎಂಬ ಮಾಹಿತಿ ತಿಳಿದ ಬಳಿಕ ಕುಟುಂಬಸ್ಥರು ಆತಂಕಗೊOಡು ಸ್ಥಳೀಯರಿಗೆ ವಿಷಯ ತಿಳಿಸಿದರು. ಬಾಲಕ ಬರುವ ದಾರಿಯ ಸಮೀಪದ ಕೆರೆಯ ಬಳಿ ರಕ್ತದ ಕಲೆಗಳು ಕಂಡುಬOದ ಹಿನ್ನೆಲೆಯಲ್ಲಿ ಪೊಲೀಸರು, ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರು. ಸುಮಾರು 11.30 ರ ವೇಳೆಗೆ ಸುಮಂತ್‌ನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಬಾಲಕನ ತಲೆಯ ಭಾಗದಲ್ಲಿ ಗಂಭೀರ ಗಾಯಗಳಿರುವುದು ಕಂಡುಬOದಿದ್ದು, ಸಾವಿನ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿವೆ.

    ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ ಸುಬ್ಬಾಪುರ ಮಠ, ಸಬ್ ಇನ್ಸ್ಪೆಕ್ಟರ್ ಆನಂದ್ ಎಂ., ತಹಶೀಲ್ದಾರ್ ಪೃಥ್ವಿ ಸಾನಿಕಂ, ಆರ್‌ಐ ಪಾವಡಪ್ಪ, ಬಿಇಒ ತಾರಕೇಶ್ವರಿ, ಆಡಳಿತಾಧಿಕಾರಿಗಳು, ಶಾಲಾ ಶಿಕ್ಷಕರು ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    Post Views: 279

    Related Posts

    ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳಿಗೆ ಬೆದರಿಕೆ-ಆರೋಪಿಯ ಬಂಧನ

    October 23, 2026

    “ಬನ ಸಿನಿಮಾ ತುಳುನಾಡಿಗೆ ಕೀರ್ತಿ ತರುವ ಕೆಲಸ ಮಾಡಲಿ“ -ಐವನ್ ಡಿಸೋಜ

    October 23, 2026

    ಮಂಗಳೂರು: ಫ್ಲ್ಯಾಟ್ ನೀಡದೆ ಜಾಗದ ಮಾಲೀಕರಿಗೆ ವಂಚನೆ ಆರೋಪ-ಬಿಲ್ಡರ್ ಡೊನಾಲ್ಡ್ ಪಿಂಟೋ ವಿರುದ್ಧ ಕೇಸ್ ದಾಖಲು

    October 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳಿಗೆ ಬೆದರಿಕೆ-ಆರೋಪಿಯ ಬಂಧನ

    October 23, 2026

    “ಬನ ಸಿನಿಮಾ ತುಳುನಾಡಿಗೆ ಕೀರ್ತಿ ತರುವ ಕೆಲಸ ಮಾಡಲಿ“ -ಐವನ್ ಡಿಸೋಜ

    October 23, 2026

    ಮಂಗಳೂರು: ಫ್ಲ್ಯಾಟ್ ನೀಡದೆ ಜಾಗದ ಮಾಲೀಕರಿಗೆ ವಂಚನೆ ಆರೋಪ-ಬಿಲ್ಡರ್ ಡೊನಾಲ್ಡ್ ಪಿಂಟೋ ವಿರುದ್ಧ ಕೇಸ್ ದಾಖಲು

    October 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.