Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ : 4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, ಆಫ್ರಿಕಾ ಪ್ರಜೆ ಅರೆಸ್ಟ್!
    ಇತ್ತೀಚಿನ ಸುದ್ದಿ

    ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ : 4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, ಆಫ್ರಿಕಾ ಪ್ರಜೆ ಅರೆಸ್ಟ್!

    May 17, 2025
    Share

    ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಆಫ್ರಿಕಾ ಪ್ರಜೆಯ ಬಳಿಯಿದ್ದ ಸುಮಾರು ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದು ಆಫ್ರಿಕಾ ಪ್ರಜೆಯನ್ನು ಇದೀಗ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಹೌದು ಬೆಂಗಳೂರು ಹೊರವಲಯದ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ಮನೆ ಮಾಡಿಕೊಂಡು ಡ್ರಗ್ ಡೀಲ್ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್ ಡೇನಿಯಲ್ ಎಂಬುವವನ್ನು ಬಂಧಿಸಿ ಬರೋಬ್ಬರಿ ನಾಲ್ಕು ಕೋಟಿ ರೂ. ಮೌಲ್ಯದ 2.5 ಕೆಜಿ ಎಂಡಿಎಂಎ ಕ್ರಿಸ್ಟೆಲ್ ಸೀಜ್ ಮಾಡಿದ್ದಾರೆ. ಆರೋಪಿಯು 2023 ರ ಡಿಸೆಂಬರ್​​​ನಲ್ಲಿ ವ್ಯಾಪಾರ ವೀಸಾದ ಮೇಲೆ ಬೆಂಗಳೂರಿಗೆ ಆಗಮಿಸಿ, ಸೋಲದೇವನಹಳ್ಳಿಯಲ್ಲಿ ತನ್ನ ಸ್ನೇಹಿತನೊಂದಿಗೆ ಬಾಡಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಬಂಧಿತನಿಂದ ಪೊಲೀಸರು 1.48 ಕೆಜಿ ಬಿಳಿ ಬಣ್ಣದ ಎಂಡಿಎಂಎ ಡ್ರಗ್ಸ್ ಮತ್ತು 1.1 ಕೆಜಿ ಕಂದು ಬಣ್ಣದ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 4 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಹೆಚ್ಚಾಗುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ ವೃತ್ತಿಪರರನ್ನೇ ಡ್ರಗ್ಸ್ ಮಾಫಿಯಾ ಗುರಿಯಾಗಿಸುತ್ತಿದೆ. ಇಂಥ ಕೃತ್ಯಗಳ ವಿರುದ್ಧ ಸಿಸಿವಿ ಪೊಲೀಸರು ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    Post Views: 66

    Related Posts

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಿಕಾಂ ವಿದ್ಯಾರ್ಥಿ ಗಾಯ, ಆರ್ಸಿಬಿ, ಕೆಎಸ್ಸಿಎ ವಿರುದ್ಧ ಪ್ರಕರಣ ದಾಖಲು

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.