Facebook Twitter Instagram
    Wednesday, August 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ ದೈವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ- ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಸುರತ್ಕಲ್ ದೈವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ- ಆರೋಪಿ ಬಂಧನ

    August 12, 2026
    Share

    ಸುರತ್ಕಲ್ ಮಧ್ಯ ಕೊಡಿಪಾಡಿಯ ಕೋರ್ದಬ್ಬು ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಮಾಡಿದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

    ಉಡುಪಿ ಮೂಲದ ಸುಖೇಶ್ ನಾಯ್ಕ್ (40) ಬಂಧಿತ ಆರೋಪಿ. ಆ.5ರಂದು ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಕಬ್ಬಿಣದ ಆಯುಧ ಬಳಸಿ ದೈವಸ್ಥಾನದ ಬಾಗಿಲು ಹಾಗೂ ಕಿಟಕಿಯನ್ನು ಮುರಿದು ಒಳನುಗ್ಗಿದ ಆರೋಪಿ, ಕಾಣಿಕೆ ಹುಂಡಿಯನ್ನು ಕಳವು ಮಾಡಿದ್ದ. ಹುಂಡಿಯಲ್ಲಿದ್ದ ಸುಮಾರು 15 ಸಾವಿರ ನಗದು ಕಳವಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಸುರತ್ಕಲ್ ಪೊಲೀಸರು ತನಿಖೆ ಆರಂಭಿಸಿದ್ದರು.

    ಖಚಿತ ಮಾಹಿತಿ ಆಧರಿಸಿ ಆ.10ರಂದು ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಉಡುಪಿ ಮೂಲದ ಸುಖೇಶ್ ನಾಯ್ಕ್ (40) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ದೈವಸ್ಥಾನದಲ್ಲಿ ಕಳವು ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಸುಖೇಶ್ ನಾಯ್ಕ್ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿದೆ. ಈ ಪೈಕಿ ಒಂದು ಪ್ರಕರಣದಲ್ಲಿ ಆತ ಶಿಕ್ಷೆಗೊಳಗಾಗಿದ್ದಾನೆ ಎನ್ನಲಾಗಿದೆ. ಅಲ್ಲದೆ, ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ದಸ್ತಗಿರಿ ವಾರಂಟ್‌ಗಳೂ ಇರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.  

    Post Views: 1

    Related Posts

    ಲಾಭಾಂಶದ ಆಸೆಗೆ ಆನ್‌ಲೈನ್‌ನಲ್ಲಿ ಹೂಡಿಕೆ: ವ್ಯಕ್ತಿಗೆ 32 ಲಕ್ಷ ರೂ. ಪಂಗನಾಮ

    August 12, 2026

    ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸರಗಳ್ಳನ 45 ದಿನಗಳ ಬಳಿಕ ಬಂಧನ

    August 12, 2026

    ಮಂಗಳೂರು: ದೈವಸ್ಥಾನದ ಹುಂಡಿ ಕದ್ದ ಆರೋಪಿ ಅರೆಸ್ಟ್- 18 ಪ್ರಕರಣಗಳು ಬಯಲಿಗೆ

    August 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸುರತ್ಕಲ್ ದೈವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ- ಆರೋಪಿ ಬಂಧನ

    August 12, 2026

    ಲಾಭಾಂಶದ ಆಸೆಗೆ ಆನ್‌ಲೈನ್‌ನಲ್ಲಿ ಹೂಡಿಕೆ: ವ್ಯಕ್ತಿಗೆ 32 ಲಕ್ಷ ರೂ. ಪಂಗನಾಮ

    August 12, 2026

    ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸರಗಳ್ಳನ 45 ದಿನಗಳ ಬಳಿಕ ಬಂಧನ

    August 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.