Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ಬೈಕಂಪಾಡಿ ಬಳಿ ಸರಣಿ ಅಪಘಾತ – ಸ್ಕೂಟರ್ ಸವಾರರಿಗೆ ಗಾಯ
    ಇತ್ತೀಚಿನ ಸುದ್ದಿ

    ಸುರತ್ಕಲ್: ಬೈಕಂಪಾಡಿ ಬಳಿ ಸರಣಿ ಅಪಘಾತ – ಸ್ಕೂಟರ್ ಸವಾರರಿಗೆ ಗಾಯ

    May 27, 2024
    Share

    ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಜೋಕಟ್ಟೆ ಕ್ರಾಸ್ ಬಳಿ ತಡೆರಹಿತ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದ್ದು ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳು ಸ್ಕೂಟರ್ ಸವಾರನನ್ನು ಪಣಂಬೂರು ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಎಕೆಎಂಎಸ್ ಹೆಸರಿನ ತಡೆರಹಿತ ಬಸ್ ಜೋಕಟ್ಟೆ ಕ್ರಾಸ್ ತಲುಪುತ್ತಿದ್ದಂತೆ ಟ್ರಾಫಿಕ್ ಪೊಲೀಸ್ ಜಂಕ್ಷನ್ ಬಳಿ ನಿಲ್ಲಿಸಿದ್ದ ಎರಡು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್ ಡಿಕ್ಕಿಯಾದ ಒಂದು ಕಾರು ಮುಂದಕ್ಕೆ ಹೋಗಿ ಎದುರು ನಿಲ್ಲಿಸಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದ್ದು ಮತ್ತೆ ಮುಂದಕ್ಕೆ ಚಲಿಸಿ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಸ್ಕೂಟರ್ ಸವಾರ ಸತೀಶ್ ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಕೂಡಲೇ ಟ್ರಾಫಿಕ್ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಬಸ್ ಚಾಲಕ ಇರ್ಫಾನ್ ವಿರುದ್ಧ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 250

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.