ಉಳ್ಳಾಲ : ನೇಣು ಬಿಗಿದು ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಲಕ್ಷ್ಮೀಗುಡ್ಡೆಯಲ್ಲಿ ನೆಲೆಸಿತ್ತು.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಧನರಾಜ್ ತಂದೆ ರಿಕ್ಷಾ ಚಾಲಕ ಲಿಂಗಪ್ಪ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ಧನರಾಜ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮೃತದೇಹವನ್ನು ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು , ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.
ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಕುಂಪಲ ಲಕ್ಷ್ಮೀಗುಡ್ಡೆಯಲ್ಲಿ ನಡೆದಿದೆ. ಧನರಾಜ್ ಪೂಜಾರಿ(32) ಆತ್ಮಹತ್ಯೆ ಮಾಡಿಕೊಂಡ ಯುವಕ. ಧನರಾಜ್ ಅವಿವಾಹಿತರಾಗಿದ್ದು, ದೇರಳಕಟ್ಟೆಯ ಯೇನಪೋಯ ಪಾರ್ಕ್ ನಲ್ಲಿ ರಿಕ್ಷಾ ಚಲಾಯಿಸುತ್ತಿದ್ದರು. ಗುರುವಾರ ಸಂಜೆ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.