Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ನೇಪಾಳ ಮೂಲದ ಬಾಲಕಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಉಳ್ಳಾಲ: ನೇಪಾಳ ಮೂಲದ ಬಾಲಕಿ ಆತ್ಮಹತ್ಯೆ

    June 9, 2024
    Share

    ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ.ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು, ಆಕೆಯನ್ನು ಮಂಗಳೂರಿನಲ್ಲೆ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು. ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸುವುದಾಗಿ ಹಠ ಹಿಡಿದಿದ್ದು ಈ ಬಗ್ಗೆ ಪೋಷಕರಲ್ಲಿ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ.ಶನಿವಾರ ಮದ್ಯಾಹ್ನ ರಬೀನಳ ತಾಯಿ ರಮೀಲ ಅವರು ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರಕೊಂಡು ಬರುವ ವೇಳೆ ರಬೀನ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಬಳಿಕ ಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.ಮೃತ ರಬೀನ ತಂದೆ, ತಾಯಿ, ಇಬ್ಬರು ಸಹೋದರಿಯರು, ಓರ್ವ ಸಹೋದರನನ್ನು ಅಗಲಿದ್ದಾರೆ.

    Post Views: 247

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.