Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಬಾಂಬ್’ ಇಟ್ಟಿದ್ದು ನಾನೇ: ಕೇರಳ ಸರಣಿ ಸ್ಪೋಟಕ ಪ್ರಕರಣದ ‘ಶಂಕಿತ ವ್ಯಕ್ತಿ’ ಪೊಲೀಸರಿಗೆ ಶರಣಾಗತಿ
    ಇತ್ತೀಚಿನ ಸುದ್ದಿ

    ‘ಬಾಂಬ್’ ಇಟ್ಟಿದ್ದು ನಾನೇ: ಕೇರಳ ಸರಣಿ ಸ್ಪೋಟಕ ಪ್ರಕರಣದ ‘ಶಂಕಿತ ವ್ಯಕ್ತಿ’ ಪೊಲೀಸರಿಗೆ ಶರಣಾಗತಿ

    October 29, 2023
    Share

    ಕೇರಳ: ಎರ್ನಾಕುಲಂನ ಪ್ರಾರ್ಥನಾ ಮಂದಿರವೊಂದರಲ್ಲಿ ಸುಧಾರಿತ ಐಇಡಿ ಸ್ಪೋಟಕವನ್ನು ಸ್ಪೋಟಿಸಿ, ಸರಣಿ ಸ್ಪೋಟಕವನ್ನು ನಡೆಸಲಾಗಿತ್ತು. ಇಂತಹ ಕನ್ವೆನ್ಷನ್ ಸೆಂಟರ್ ನಲ್ಲಿ ಬಾಂಬ್ ಇಟ್ಟಿದ್ದು ನಾನೇ ಅಂತ ತಪ್ಪೊಪ್ಪಿಕೊಂಡಿರುವಂತ ವ್ಯಕ್ತಿಯೋರ್ವ, ಪೊಲೀಸರಿಗೆ ಶರಣಾಗಿರೋದಾಗಿ ತಿಳಿದು ಬಂದಿದೆ.

    ಕೇರಳದ ಎರ್ನಾಕುಲಂ ಬಳಿಯಲ್ಲಿ ಕ್ರೈಸ್ತ ಸಮುದಾಯದವರ ಪ್ರಾರ್ಥನೆಯ ವೇಳೆಯಲ್ಲಿ ಸರಣಿ ಸ್ಪೋಟಕ ಪ್ರಕರಣ ಸಂಭವಿಸಿತ್ತು. ಈ ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ 28ಕ್ಕೆ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೀಗೆ ಚಿಕಿತ್ಸೆ ಪಡೆಯುತ್ತಿರುವಂತ ಅನೇಕರ ಸ್ಥಿತಿ ಕೂಡ ಗಂಭೀರಗೊಂಡಿದೆ ಎನ್ನಲಾಗುತ್ತಿದೆ.

    ಈ ಸರಣಿ ಸ್ಪೋಟಕ ಪ್ರಕರಣದ ನಂತ್ರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಾಳೆ ಘಟನೆ ಕುರಿತಂತೆ ಮಹತ್ವದ ಚರ್ಚೆ ನಡೆಸೋದಕ್ಕೆ ಬೆಳಗ್ಗೆ 10 ಗಂಟೆಗೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ.

    ಮತ್ತೊಂದೆಡೆ ಸಿಎಂ ಪಿಣರಾಯಿ ವಿಜಯನ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರೆ ಮಾಡಿ, ಸ್ಪೋಟಕ ಪ್ರಕರಣ ಸಂಬಂಧ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಘಟನೆಯ ಕುರಿತಂತೆ ಎನ್‌ಐಎ, ಎನ್‌ಎಸ್ ಜಿ ತಂಡದಿಂದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ತನಿಖೆ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.

    ಈ ಬೆನ್ನಲ್ಲೇ ಕೊಚ್ಚಿ ಮೂಲಕ ವ್ಯಕ್ತಿಯೋರ್ವ ಕೇರಳದ ಎರ್ನಾಕುಲಂ ಪ್ರಾರ್ಥನಾ ಮಂದಿರದಲ್ಲಿನ ಸರಣಿ ಸ್ಪೋಟಕಕ್ಕೆ ನಾನೇ ಕಾರಣ. ಪ್ರಾರ್ಥನಾ ಮಂದಿರದಲ್ಲಿ ಬಾಂಬ್ ಇಟ್ಟಿದ್ದು ನಾನೇ ಅಂತ ಒಪ್ಪಿಕೊಂಡು, ಶಂಕಿತ ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದಿರುವಂತ ಕೇರಳ ಪೊಲೀಸರು ತೀವ್ರವಾಗಿ ಘಟನೆ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ.

    Post Views: 269

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.