Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಚೇರಿ ವೇಳೆ ಪಾರ್ಟಿ: ಐವರು ಇಂಜಿನಿಯರ್ ಗಳ ಅಮಾನತು
    ಇತ್ತೀಚಿನ ಸುದ್ದಿ

    ಕಚೇರಿ ವೇಳೆ ಪಾರ್ಟಿ: ಐವರು ಇಂಜಿನಿಯರ್ ಗಳ ಅಮಾನತು

    May 26, 2024
    Share

    ಬಾಗಲಕೋಟೆ ಜಿಲ್ಲೆ ಜಮಖಂಡಿಯ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರದಲ್ಲಿ ಕಚೇರಿ ವೇಳೆ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿ ಕೆ.ಎಂ. ಜಾನಕಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

    ಪಂಚಾಯತ್ ರಾಜ್ ಜಮಖಂಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಎಂ. ನಾಯಕ್, ಸಹಾಯಕ ಇಂಜಿನಿಯರ್ ಗಳಾದ ಜಗದೀಶ ನಾಡಗೌಡ, ರಾಮಪ್ಪ ರಾಥೋಡ, ಕಿರಿಯ ಎಂಜಿನಿಯರ್ ಗಜಾನನ ಪಾಟೀಲ್ ಅಮಾನತುಗೊಂಡವರು.

    ನಿರೀಕ್ಷಣಾ ಮಂದಿರದ ಬೀಗಗಳನ್ನು ಪಂಚಾಯತ್ ರಾಜ್ ಇಂಜಿನಿಯರ್ ಗಳಿಗೆ ನೀಡಲು ನಿರ್ದೇಶನ ನೀಡಿದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಎಸ್.ಆರ್. ಜಂಬಗಿ ಅವರನ್ನು ಅಮಾನತು ಮಾಡಲಾಗಿದೆ.

    ಗುತ್ತಿಗೆದಾರರೊಂದಿಗೆ ಸೇರಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ನಿರೀಕ್ಷಣಾ ಮಂದಿರದಲ್ಲಿ ಮದ್ಯ ಸೇವನೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಅಮಾನತು ಆದೇಶ ಹೊರಡಿಸಿದ್ದಾರೆ.

    ಮೇ 22 ರಂದು ಜಮಖಂಡಿ ಪ್ರವಾಸಿ ಮಂದಿರದಲ್ಲಿ ಗುತ್ತಿಗೆದಾರರೊಂದಿಗೆ ಮದ್ಯದ ಪಾರ್ಟಿ ಮಾಡಿದ್ದರು. ಕೆಲಸಕ್ಕೆ ಗೈರುಹಾಜರಾಗಿ ನೀತಿ ಸಂಹಿತೆ ಉಲ್ಲಂಘಿಸಿ ಮದ್ಯಪಾನ ಮಾಡಿದ್ದರು. ಮೇ 23 ರಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಅದೇ ದಿನ ಜಿಲ್ಲಾಧಿಕಾರಿಗಳು ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಸಮರ್ಪಕ ಉತ್ತರ ನೀಡುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅಮಾನತು ಆದೇಶ ಹೊರಡಿಸಿದ್ದಾರೆ.

    Post Views: 231

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.