Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಕೋಳಿ ನುಂಗಲು ಹೋದ ಸಾರಿಬಳ ಹಾವು.!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕೋಳಿ ನುಂಗಲು ಹೋದ ಸಾರಿಬಳ ಹಾವು.!

    December 6, 2022
    Share

    ಬೆಳ್ತಂಗಡಿ: ಅಪರೂಪದ ಸಾರಿಬಳ ಹಾವೊಂದು ಕೋಳಿ ಮರಿಯನ್ನು ನುಂಗಲು ಪ್ರಯತ್ನಿಸಿದ ಗಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ನಡೆದಿದ್ದು, ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್‌ ಸುರಕ್ಷಿತವಾಗಿ ಹಿಡಿದು, ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

    ಕೊಯ್ಯೂರು ಗ್ರಾಮದ ಅರಂತೊಟ್ಟು ನಿವಾಸಿ ದೀಪಕ್ ಎಂಬುವರ ಮನೆಯಲ್ಲಿ ಸುಮಾರು 5 ಅಡಿ ಉದ್ದದ ಸಾರಿಬಳ ಹಾವು ಕೋಳಿಮರಿಯನ್ನು ನುಂಗುತ್ತಿದ್ದ ಸಮಯ ಅದನ್ನು ಕಂಡ ಮನೆಯವರು ಉರಗಮಿತ್ರ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ತಕ್ಷಣ ಅವರು ಆಗಮಿಸಿ ರಕ್ಷಿಸಿದ್ದಾರೆ. ಫೋರೆಸ್ಟನ್ಸ್ ಬೆಕ್ಕು ಹಾವು ಅಥವಾ ಸಾರಿಬಳ ಎಂದೇ ಕರೆಯಲ್ಪಡುವ ಈ ಹಾವು ಹೆಚ್ಚಾಗಿ ಗುಜರಾತ್, ಕೇರಳ ಹಾಗೂ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶದ ಕಾಡುಗಳಲ್ಲಿ ಕಂಡು ಬರುತ್ತದೆ. ಇವು ಜನವಸತಿ ಪ್ರದೇಶದಲ್ಲಿ ಕಂಡುಬರುವುದು ತೀರಾ ವಿರಳ.

    ಕೊಯ್ಯೂರಿನಲ್ಲಿ ಈ ಪ್ರಭೇದದ ಹಾವು ಕಂಡುಬಂದಿದೆ. ತನ್ನ 11 ವರ್ಷಗಳ ಹಾವು ಹಿಡಿಯುವ ಸೇವೆಯಲ್ಲಿ ಇದುವರೆಗೆ ಬೂದು ಬಣ್ಣದ ಸಾರಿಬಾಳ ಎರಡು ಬಾರಿ ಹಾಗೂ ತಿಳಿ ಕೆಂಪು ಕಂಡು ಕಂದು ಬಣ್ಣದ ಹಾವು ಇದೇ ಮೊದಲ ಬಾರಿ ಕಂಡು ಬಂದಿದೆ ಎಂದು ಅಶೋಕ್ ಅವರು ತಿಳಿಸಿದ್ದಾರೆ. ಇವು ವಿಷ ರಹಿತ ಹಾವುಗಳಾಗಿದ್ದು ಕಟ್ಟುಹಾವನ್ನು ಹೋಲುವುದರಿಂದ ಇವು ಕಂಡು ಬಂದಲ್ಲಿ ಜನರು ಕೊಲ್ಲಲು ಮುಂದಾಗುತ್ತಿದ್ದಾರೆ.

    Post Views: 185

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.