ಬೆಂಗಳೂರು: ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಅಧಿಕಾರಿಗಳ ವರ್ಗಾವಣೆಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು 10 ತಹಶೀಲ್ದಾರ್ ಅವರನ್ನು ವರ್ಗಾವಣೆ ( Tahsildar Transfer ) ಮಾಡಿ ಆದೇಶಿಸಿದೆ.
ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ತಹಶೀಲ್ದಾರ್ ಗಳನ್ನು ನಿಯೋಜಿಸಿದಂತ ಸ್ಥಳಕ್ಕೆ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದಾರೆ.