Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಾಟ್ಸಪ್‌ ಮೂಲಕ ತಲಾಕ್‌ : ಪತಿ ವಿರುದ್ಧ ದೂರು ದಾಖಲು
    ಇತ್ತೀಚಿನ ಸುದ್ದಿ

    ವಾಟ್ಸಪ್‌ ಮೂಲಕ ತಲಾಕ್‌ : ಪತಿ ವಿರುದ್ಧ ದೂರು ದಾಖಲು

    September 18, 2023
    Share

    ಸುಳ್ಯ : ಸುಳ್ಯ ಜಯನಗರದ ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಪ್‌ ಸಂದೇಶದ ಮೂಲಕ ತ್ರಿವಳಿ ತಲಾಕ್‌ ನೀಡಿರುವ ಘಟನೆ ನಡೆದಿದೆ.ಈ ಬಗ್ಗೆ ಮಹಿಳೆ ಸುಳ್ಯ ಪೊಲೀಸ್‌ ಠಾಣೆಗೆ ಪತಿಯ ವಿರುದ್ಧ ದೂರು ನೀಡಿದ್ದಾರೆ. ಕೇರಳ ತ್ರಿಶೂರ್‌ ಮೂಲದ ಅಬ್ದುಲ್‌ ರಾಶಿದ್‌ ತಲಾಕ್‌ ನೀಡಿದ ಪತಿ. ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಯುವತಿಯನ್ನು ವಿವಾಹವಾಗಿದ್ದರು.ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಎರಡು ವರ್ಷಗಳ ಹಿಂದೆ ರಾಶಿದ್‌ ಪತ್ನಿಯನ್ನು ವಿದೇಶಕ್ಕೆ ಕರೆಸಿಕೊಂಡಿದ್ದರು. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ಪತ್ನಿ ಮನೆಯಲ್ಲಿ ಬಿಟ್ಟು ವಿದೇಶಕ್ಕೆ ಉದ್ಯೋಗಕ್ಕೆ ತೆರಳಿದ್ದರು.ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ಮನಸ್ತಾಪ ಉಂಟಾಗಿತ್ತು. ಸಂಬಂಧಿಕರು, ಹಿರಿಯರು ಇದರ ಬಗ್ಗೆ ಮಾತನಾಡಿ ಸರಿಪಡಿಸಲು ಪ್ರಯತ್ನಿಸಿದ್ದರು. ಆದರೆ ಇದು ಯಾವುದನ್ನು ಕೇಳದೆ ಏಕಾಏಕಿ ರಾಶಿದ್ ಪತ್ನಿಯ ಮೊಬೈಲ್‌ಗೆ ಮೂರು ತಲಾಕ್‌ನ ವಾಟ್ಸಾಪ್‌ ಸಂದೇಶ ಕಳುಹಿಸಿದ್ದಾರೆ. ಮಹಿಳೆ ಸುಳ್ಯ ಪೊಲೀಸರಿಗೆ ತನಗೆ ನ್ಯಾಯ ಕೊಡಿಸುವಂತೆ ದೂರು ನೀಡಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 178

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.