Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಟ್ಯಾಂಕರ್‌ ವ್ಯವಹಾರ, ನಕಲಿ ದಾಖಲೆ ಸೃಷ್ಟಿಸಿ ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಟ್ಯಾಂಕರ್‌ ವ್ಯವಹಾರ, ನಕಲಿ ದಾಖಲೆ ಸೃಷ್ಟಿಸಿ ವಂಚನೆ

    December 24, 2024
    Share

    ಮಂಗಳೂರು: ಟ್ಯಾಂಕರ್‌ ವ್ಯವಹಾರಕ್ಕೆ ಸಂಬಂಧಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಡ್ಯಾರಿನ ಅಶೋಕ್‌ ಎ. ವಂಚಿಸಿರುವ ಬಗ್ಗೆ ಪ್ರವೀಣ್‌ ಕುತ್ತಾರ್‌ ಪೊಲೀಸರಿಗೆ ದೂರು ನೀಡಿದ್ದಾರೆ.

    ಪ್ರವೀಣ್‌ ಅವರು ಅಶೋಕ್‌ ಜೊತೆ ಟ್ಯಾಂಕರ್‌ ವ್ಯವಹಾರ ಮಾಡುತ್ತಿದ್ದು, ಅವರ ಹೆಸರಿನಲ್ಲಿ 9 ಟ್ಯಾಂಕರ್‌ಗಳಿವೆ. ಅವರು ಕುತ್ತಾರಿನಲ್ಲಿ ಹೊಟೇಲ್‌ ನಡೆಸುತ್ತಿದ್ದುದರಿಂದ ಅವರ ಬ್ಯಾಂಕ್‌ ವ್ಯವಹಾರ, ಹೊಸ ಟ್ಯಾಂಕರ್‌ ಖರೀದಿ, ಹಳೇ ಟ್ಯಾಂಕರ್‌ ಮಾರಾಟ ಇತ್ಯಾದಿ ವ್ಯವಹಾರಗಳನ್ನು ಅಶೋಕ್‌ ನೋಡಿಕೊಳ್ಳುತ್ತಿದ್ದರು.

    ತಣ್ಣೀರುಬಾವಿಯಲ್ಲಿರುವ ನಯಾರಾ ತೈಲ ಕಂಪೆನಿಯಲ್ಲಿರುವ ಪ್ರವೀಣ್‌ ಟ್ರಾನ್ಸ್‌ಪೋರ್ಟ್ ಕಂಪೆನಿಯ ಮೂಲಕ ಪ್ರವೀಣ್‌ ವ್ಯವಹಾರ ಮಾಡುತ್ತಿದ್ದು, ಇತ್ತೀಚೆಗೆ ಸುಮಾರು 2 ತಿಂಗಳ ಹಿಂದೆ ಅವರು 9 ಟ್ಯಾಂಕರ್‌ಗಳ ದಾಖಲೆಗಳನ್ನು ಪರಿಶೀಲಿಸಿದಾಗ ಆರೋಪಿ ಅಶೋಕ್‌ ಎ. 9 ಟ್ಯಾಂಕರ್‌ಗಳ ಎಲ್ಲ ದಾಖಲೆ ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ನಕಲಿ ಸಹಿ ಹಾಕಿಸಿಕೊಂಡು ನೈಜ ದಾಖಲೆಗಳೆಂದು ಆರ್‌ಟಿಒ ಕಚೇರಿಗೆ ಹಾಜರುಪಡಿಸಿ ಅವರ ಪತ್ನಿ, ಮಕ್ಕಳು ಮತ್ತು ಸಂಬಂಧಿಕರ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ.

    ನಯಾರಾ ತೈಲ ಕಂಪೆನಿಯಲ್ಲಿ ಪ್ರವೀಣ್‌ ಹೆಸರಿನಲ್ಲಿದ್ದ ಟ್ರಾನ್ಸ್‌ಪೋರ್ಟ್ ವ್ಯವಹಾರವನ್ನು ನಕಲಿ ಸಹಿ ಹಾಕಿಸಿಕೊಂಡು ಅವರ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ. ಆರೋಪಿ ಅಶೋಕ್‌ ಎ. ಅವರೊಂದಿಗೆ ನಯಾರ ತೈಲ ಕಂಪೆನಿಯ ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    Post Views: 200

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.