ಅಂಕೋಲಾ: ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಉರುಳಿ ಬಿದ್ದು ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ.
ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೊದಲೇ ಪೆಟ್ರೋಲ್ ಇದ್ದಿದ್ದರಿಂದ ನೋಡ ನೋಡುತ್ತಿದ್ದಂತೇ ಟ್ಯಾಂಕರ್ ಹೊತ್ತಿ ಉರಿದಿದೆ. ಇಬ್ಬರಿಗೆ ಗಂಭೀರ ಅಲ್ಲದೇ ಬೆಂಕಿಯ ಜ್ವಾಲೆ ರಸ್ತೆ ಪಕ್ಕದ ಅರಣ್ಯಕ್ಕೂ ವ್ಯಾಪಿಸಿದ್ದು, ಬಳಿಕ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಟ್ಯಾಂಕರ್ ಸಂಪೂರ್ಣ ಸುಟ್ಟು ಕರಕಲಾಗಿದೆ.




