ಇಂಫಾಲ: ಈಶಾನ್ಯ ಭಾಗದ ಮಣಿಪುರ ರಾಜ್ಯದಲ್ಲಿ ಮುಂದುವರಿದಿದ್ದು, ಇದೀಗ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ಕರೆ ನೀಡಿದ್ದಾರೆ.
ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತರೂರ್ ಅವರು ಬರವಣಿಗೆಯಲ್ಲಿ ಹಂಚ್ಚಿಕೊಂಡಿದ್ದು ಹೀಗೆ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಂತೆ ಬಲ ಚಿಂತನೆಯುಳ್ಳ ಭಾರತೀಯರು ತಮಗೆ ಭರವಸೆ ನೀಡಿ ಉತ್ತಮ ಆಡಳಿತಕ್ಕೆ ಏನಾಯ್ತು ಎಂಬುದನ್ನು ತಮಗೆ ತಾವೇ ಕೇಳಿಕೊಳ್ಳಬೇಕು. ಮಣಿಪುರದ ಮತದಾರರು ತಮ್ಮ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಕೇವಲ 1 ವರ್ಷದ ಬಳಿಕ ದೊಡ್ಡ ದ್ರೋಹವನ್ನು ಅನುಭವಿಸುತ್ತಿದ್ದಾರೆ ಹಾಗೂ ಆಯ್ಕೆಯಾಗಿರುವುದಕ್ಕೆ ಕಾರಣವಾದ ಕೆಲಸಗಳನ್ನೇ ರಾಜ್ಯ ಸರ್ಕಾರ ಮಾಡಲು ಸಿದ್ಧವಾಗಿಲ್ಲ.
ಇದೀಗ ರಾಷ್ಟ್ರಪತಿಗಳು ಆಳ್ವಿಕೆ ನಡೆಸಲು ಸಮಯ ಬಂದಿದೆ ಎಂದು ಹೇಳಿದ್ದಾರೆ.ಮಣಿಪುರದ ಆದಿವಾಸಿಗಳು ಹಾಗೂ ಬಹುಸಂಖ್ಯಾತ ಮೈತೆ ಸಮುದಾಯಕ್ಕೆ ಸೇರಿದ ಜನರ ನಡುವೆ ಹಿಂಸಾತ್ಮಕ ಘರ್ಷಣೆ ಬುಧವಾರದಂದು ಪ್ರಾರಂಭವಾಯಿತು, ಇದರ ಪರಿಣಾಮ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದ್ದು, ಘರ್ಷಣೆಯಲ್ಲಿ 54 ಜನರು ಸಾವನ್ನಪ್ಪಿದ್ದಾರೆ.ಶನಿವಾರ ರಾಜ್ಯದಲ್ಲಿ ಶಾಂತಿಯ ಉಪಕ್ರಮಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿ ಸಮಿತಿಯನ್ನು ರಚಿಸುವುದಾಗಿ ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಿಳಿಸಿದ್ದಾರೆ.