Facebook Twitter Instagram
    Sunday, May 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»200 ರೂ. ಸಾಲಕ್ಕಾಗಿ ಕೊಲೆ: ಟೀ ಅಂಗಡಿ ಮಾಲೀಕನ ಬರ್ಬರ ಹತ್ಯೆ
    ಇತ್ತೀಚಿನ ಸುದ್ದಿ

    200 ರೂ. ಸಾಲಕ್ಕಾಗಿ ಕೊಲೆ: ಟೀ ಅಂಗಡಿ ಮಾಲೀಕನ ಬರ್ಬರ ಹತ್ಯೆ

    May 17, 2026
    Share

    ಬೆಂಗಳೂರು: ಸಮಾಜದಲ್ಲಿ ಹಳೆಯ ದ್ವೇಷಕ್ಕೆ, ರೋಷಕ್ಕೆ ಕೊಲೆ ನಡೆದ ಉದಾಹರಣೆಗಳಿವೆ. ಹೆಣ್ಣಿಗಾಗಿ, ಹಣಕ್ಕಾಗಿಯೂ ಕೊಲೆ, ಸುಲಿಗೆಗಳು ನಡೆಯುತ್ತವೆ. ಆದರೆ ಕೇವಲ 200 ರೂ. ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ ಪ್ರಕರಣ ಇದೇ ಮೊದಲಿರಬಹುದು. ಹೌದು, ಟೀ ಅಂಗಡಿ ಮಾಲೀಕ ಬಾಕಿ ಇರುವ ಹಣ ನೀಡುವಂತೆ ಕೇಳಿದ ಕಾರಣಕ್ಕೇ ದೊಡ್ಡಬಳ್ಳಾಪುರ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್​ನಲ್ಲಿ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ.

    ಇನ್ನು ಮುಂದೆ ಸಾಲ ಕೊಡುವುದಿಲ್ಲ ಎಂದಿದ್ದ ಮಾಲೀಕ

    ದ್ಯಾವಸಂದ್ರ ಗ್ರಾಮದ ಮಂಜುನಾಥ (40) ಕೊಲೆಯಾದ ದುರ್ದೈವಿ. ಮೇ 12 ರಂದು ಅಪ್ಪಕಾರನಹಳ್ಳಿಯ ಮುನಿಯಪ್ಪ ಎಂಬಾತ ಮಂಜುನಾಥ್ ಅವರ ಟೀ ಅಂಗಡಿಗೆ ಬಂದು ಮತ್ತೆ ಸಾಲ ಕೇಳಿದ್ದ. ಈ ವೇಳೆ ಮಾಲೀಕ ಮಂಜುನಾಥ್, ಹಳೆಯ ಟೀ ಸಾಲದ ಬಾಕಿ ಹಣ 200 ರೂ.ಕೊಡು, ಇನ್ನು ಮುಂದೆ ಸಾಲ ಕೊಡುವುದಿಲ್ಲ ಎಂದು ಹೇಳಿದ್ದ.

    ಈ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಆರೋಪಿ ಮುನಿಯಪ್ಪ, ಪಕ್ಕದಲ್ಲೇ ಇದ್ದ ನೀಲಗಿರಿ ದೊಣ್ಣೆಯನ್ನು ತೆಗೆದುಕೊಂಡು ಮಂಜುನಾಥ್ ತಲೆಗೆ ಮನಸೋಇಚ್ಛೆ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದ. ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಂಜುನಾಥ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

    ಹೆತ್ತ ತಾಯಿಗೂ ಚಾಕು ಹಾಕಿದ್ದ ಆರೋಪಿ!

    ಆರೋಪಿ ಮುನಿಯಪ್ಪ ಈ ಹಿಂದೆ ಹೆತ್ತ ತಾಯಿಗೂ ಚಾಕು ಹಾಕಿ ಜೈಲು ಸೇರಿದ್ದ. ಇತ್ತೀಚೆಗಷ್ಟೇ ಬೇಲ್ ಮೇಲೆ ಹೊರಗೆ ಬಂದಿದ್ದ ಈತ ಈಗ ಮತ್ತೊಂದು ಕೊಲೆ ಮಾಡಿದ್ದಾನೆ. ದೊಡ್ಡಬೆಳವಂಗಲ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

    Post Views: 15

    karnataka PoliceInvestigation

    Related Posts

    ಅಂತಾರಾಜ್ಯ ಜಾಲದ ಶಂಕೆ: ನೀಲಣ್ಣವರ್ ಕೇಸ್ ಸಿಐಡಿ ವಶಕ್ಕೆ

    May 17, 2026

    ರಾಜಧಾನಿ ಎಕ್ಸ್‌ಪ್ರೆಸ್ ಕೋಚ್‌ಗೆ ಬೆಂಕಿ: ರೈಲ್ವೆ ಸಿಬ್ಬಂದಿಯಿಂದ ತಕ್ಷಣದ ಕ್ರಮ

    May 17, 2026

    ಟಯರ್ ಬ್ಲಾಸ್ಟ್‌ನಿಂದ ಸಂಭವಿಸಿದ ಕಾರು ಅಪಘಾತ; ಮೂವರಿಗೆ ಗಾಯ

    May 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.