Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಮಗುವಿನಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಶಿಕ್ಷಕಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಕಾರ್ಕಳ: ಮಗುವಿನಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಶಿಕ್ಷಕಿ ಆತ್ಮಹತ್ಯೆ..!

    November 7, 2024
    Share

    ಕಾರ್ಕಳ: ಹುಟ್ಟಿದ ಮಗುವಿನಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಶಿಕ್ಷಕಿಯೊರ್ವರು ಆತ್ಮಹತ್ಯೆ ಮಾಡಕೊಂಡ ಘಟನೆ ಈದು ಗ್ರಾಮದಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಈದು ಗ್ರಾಮದ ನಿವಾಸಿ ಪ್ರಸನ್ನಾ (29) ಎಂದು ಗುರುತಿಸಲಾಗಿದೆ.

    ಮೂಡುಬಿದಿರೆಯ ನಿವಾಸಿ ಪ್ರಸನ್ನಾ ಕಾರ್ಕಳ ತಾಲೂಕು ಈದು ಗ್ರಾಮದ ರಾಜೇಶ್ ಎಂಬವರೊಂದಿಗೆ 2022ರಲ್ಲಿ ಮದುವೆಯಾಗಿತ್ತು. ರಾಜೇಶ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರಸನ್ನಾ ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಇವರಿಗೆ ಮದುವೆಯಾಗಿ 10 ತಿಂಗಳ ಹೆಣ್ಣು ಮಗು ಇದ್ದು, ಈಕೆ ತನ್ನ ತಾಯಿ ಮನೆಗೆ ಫೋನಾಯಿಸಿ ಗಂಡನ ಮನೆಯವರು ಚೆನ್ನಾಗಿ ನೋಡುತ್ತಿದ್ದಾರೆಂದು ಹೇಳುತ್ತಿದ್ದಳು. ಆದರೆ ನನಗೆ ಇಷ್ಟು ಬೇಗ ಮಗು ಬೇಡವಾಗಿತ್ತು ನಾನು ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಇದೇ ಕೊರಗಿನಿಂದ ಖಿನ್ನತೆಗೆ ಒಳಗಾಗಿದ್ದಳು. ಈ ಬಗ್ಗೆ ಪ್ರಸನ್ನಾರವರನ್ನು ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

    ಪ್ರಸನ್ನಾ ತಾನು ಇಷ್ಟು ಓದಿದರೂ ತನಗೆ ಮಗುವಾದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ನ. 6ರಂದು ಗಂಡನ ಮನೆಯ ಡೈನಿಂಗ್ ಹಾಲ್ ನಿಂದ ಮಹಡಿಗೆ ಹೋಗುವ ಮೆಟ್ಟಿಲಿನ ಸ್ಟೀಲ್ ರಾಡಿಗೆ ಚೂಡಿದಾರ ಶಾಲ್ ನಿಂದ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    Post Views: 224

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.