Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಶಾಲಾ ವಿದ್ಯಾರ್ಥಿಗೆ ಟೆಂಪೋ ಡಿಕ್ಕಿ: ವಿದ್ಯಾರ್ಥಿ ಗಂಭೀರ
    ಇತ್ತೀಚಿನ ಸುದ್ದಿ

    ಉಡುಪಿ: ಶಾಲಾ ವಿದ್ಯಾರ್ಥಿಗೆ ಟೆಂಪೋ ಡಿಕ್ಕಿ: ವಿದ್ಯಾರ್ಥಿ ಗಂಭೀರ

    July 5, 2022
    Share

    ಉಡುಪಿ: ಅಂಬಲಪಾಡಿ ಜಂಕ್ಷನ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಅಪಘಾತವೊಂದರಲ್ಲಿ ಸೈಂಟ್ ಸಿಸಿಲಿಯ ಹೈಸ್ಕೂಲು ವಿದ್ಯಾರ್ಥಿ ಆದಿತ್ಯ ಪಿ. ಶೆಟ್ಟಿಗಾರ್ ತೀವ್ರವಾಗಿ ಗಾಯಗೊಂಡಿದ್ದಾನೆ.ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಆಪತ್ಬಾಂಧವ ವಿಶು ಶೆಟ್ಟಿ ಅವರು ಸಾರ್ವಜನಿಕರ ನೆರವಿನಿಂದ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲು ನೆರವಾದರು. ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭಿಸಿದೆ.

    ಘಟನೆಯ ವಿವರ: ಎಂದಿನಂತೆ ಸೈಕಲ್ ಮೂಲಕ ಶಾಲೆಗೆ ಹೊರಟಿದ್ದ ಆದಿತ್ಯನಿಗೆ ಅಂಬಲಪಾಡಿ ಜಂಕ್ಷನ್‌ನಲ್ಲಿ ಅತೀ ವೇಗದಿಂದ ಬಂದ ಬೊಲೆರೋ ಟೆಂಪೊ ಡಿಕ್ಕಿ ಹೊಡೆದಿದೆ. ಬಾಲಕ ತೀವ್ರವಾಗಿ ಗಾಯಗೊಂಡ ಹಿನ್ನಲೆಯಲ್ಲಿ ತಕ್ಷಣ ಸಮೀಪದ ಹೈಟೆಕ್ ಆಸ್ಪತ್ರೆಗೆ ಕೊಂಡೊಯ್ಯಲಾದರೂ, ಅಲ್ಲಿನ ವೈದ್ಯರ ಶಿಫಾರಸ್ಸಿನಂತೆ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು.

    ಟೆಂಪೋ ಚಾಲಕನ ಅತೀ ವೇಗದ ಚಾಲನೆಯೇ ದುರ್ಘಟನೆಗೆ ಕಾರಣವಾಗಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶು ಶೆಟ್ಟಿ ಅವರ ದೂರಿನ ಮೇರೆಗೆ ಪ್ರಕರಣ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

    Post Views: 254

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.