ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಬಂಟ್ವಾಳ ಮೂಲದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಎಫ್‌ಟಿಎಸ್‌ಸಿ-1) ನ್ಯಾಯಾಧೀಶ ವಿನಯ್ ದೇವರಾಜ್ 5 ವರ್ಷಗಳ ಶಿಕ್ಷೆ ವಿಧಿಸಿ ನಿನ್ನೆ (ಫೆ.15) ತೀರ್ಪು ನೀಡಿದ್ದಾರೆ.

ಅಬ್ದುಲ್ ಅಶ್ರಫ್ (42) ಶಿಕ್ಷೆಗೊಳಗಾದ ಆರೋಪಿ ಎಂದು ಗುರುತಿಸಲಾಗಿದೆ. ಏನಿದು ಪ್ರಕರಣ ? ಆರೋಪಿತು 2024ರ ಆ.11ರಂದು ತನ್ನ ಅಂಗಡಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದದೆ. ಮನೆಯಲ್ಲಿ ನೊಂದು ಕುಳಿತಿದ್ದ ಬಾಲಕಿಯನ್ನು ತಾಯಿ ಪ್ರಶ್ನಿಸಿದಾಗ ನಡೆದ ಘಟನೆಗಳನ್ನು ವಿವರಿಸಿದ್ದಳು. ಘಟನೆಯ ಕುರಿತು ಆ.12ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಸೈ ರತನ್ ಕುಮಾರ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ವೇಳೆ ನ್ಯಾಯಾಧೀಶರು ಆರೋಪಿ ಅಶ್ರಫ್ ಗೆ ಬಿಎನ್‌ಎಸ್ ಕಲಂ 74ರಡಿ 3 ವರ್ಷ ಸಾದಾ ಸಜೆ, 10,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ, ಪೊಕ್ಸೊ ಕಾಯ್ದೆಯ ಕಲಂ 10ರಡಿ 5 ವರ್ಷ ಸಾದಾ ಸಜೆ, 10,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ, ಪೊಕ್ಸೊ ಕಲಂ 12ರ ಪ್ರಕಾರ 3 ತಿಂಗಳ ಸಾದಾ ಸಜೆ ಮತ್ತು 10,000 ರೂ.ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಇದನ್ನೂ ಓದಿ ; ಗಾಂಜಾ ಸೇವನೆ ಆರೋಪ; ಮೂವರು ಆರೋಪಿಗಳು ಪೊಲೀಸರ ಕೈವಶ ನೊಂದ ಬಾಲಕಿಗೆ 1.ಲ.ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶ ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದ ಮಂಡಿಸಿದ್ದರು.