Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದ ಪ್ರಿಯಕರ..!
    ಇತ್ತೀಚಿನ ಸುದ್ದಿ

    ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದ ಪ್ರಿಯಕರ..!

    May 23, 2023
    Share

    ದೇಶಾದ್ಯಂತ ವಿವಾದದ ಕಿಡಿಯಿಂದಲೇ ಸದ್ದು ಮಾಡಿದ ‘ಲವ್‌ ಜಿಹಾದ್‌’ ಕಥೆಯಾಧಾರಿತ ಹಿಂದಿ ಸಿನಿಮಾ ‘ದಿ ಕೇರಳ ಸ್ಟೋರಿ’ (The Kerala Story) ನೋಡಲು ಜನರು ಧಾವಿಸುತ್ತಿದ್ದಾರೆ.  ಈ ಮಧ್ಯೆ ಇಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಕೇರಳ ಸ್ಟೋರಿ ಸಿನಿಮಾ ನೋಡಿದ ಬಳಿಕ ಅಂತರ್‌ಧರ್ಮೀಯ ಪ್ರೇಮಿಗಳ ಮಧ್ಯೆ ವಾಗ್ವಾದ ಶುರುವಾಗಿ ಯುವಕ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದಿರುವ ಘಟನೆ ಮಧ್ಯಪ್ರದೇಶದ ಇಂಧೋರ್‌ನಲ್ಲಿ ನಡೆದಿದೆ.  

    ಘಟನೆಯ ವಿವರ :  ಯುವಕ 12ನೇ ತರಗತಿವರೆಗೆ ಓದಿದ್ದು, ನಿರುದ್ಯೋಗಿಯಾಗಿದ್ದಾನೆ. ಯುವತಿ ಉನ್ನತ ಶಿಕ್ಷಣ ಪಡೆದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಳೆ. ಇವರಿಬ್ಬರಿಗೆ ನಾಲ್ಕು ವರ್ಷಗಳ ಹಿಂದೆ ಕೋಚಿಂಗ್ ಸೆಂಟರ್‌ನಲ್ಲಿ ಪರಿಚಯವಾಗಿದ್ದು, ನಂತರ ಪ್ರೇಮಾಂಕುರವಾಗಿತ್ತು. ಇತ್ತೀಚೆಗೆ ಈ ಪ್ರೇಮಿಗಳು ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಲು ಹೋಗಿದ್ದರು. ಸಿನಿಮಾ ನೋಡಿದ ನಂತರ ಯುವತಿ ತನ್ನ ಮುಸ್ಲಿಂ ಪ್ರಿಯಕರನ ಜೊತೆ ಚರ್ಚೆಗೆ ತೊಡಗಿದ್ದಾಳೆ. ಚರ್ಚೆ ಜಗಳವಾಗಿ ಮಾರ್ಪಟ್ಟು, ಕೋಪಗೊಂಡ ಆತ ಆಕೆಯ ಮೇಲೆ ಹಲ್ಲೆ ಮಾಡಿದ್ದು, ಜೊತೆಗೆ ಅತ್ಯಾಚಾರ ಎಸಗಿ ಆಕೆಯನ್ನು ಬಿಟ್ಟು ತೆರಳಿದ್ದಾನೆ. ಈ ಬಗ್ಗೆ ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ ‘ ಪ್ರೀತಿಸಿ, ಮದುವೆಯಾಗುತ್ತೀನಿ ಎಂದು ನಂಬಿಸಿದ ಅಂತರ್‌ಧರ್ಮೀಯ ಯುವಕ ಕಳೆದ ಕೆಲ ಸಮಯದಿಂದ ತನ್ನ ಒಟ್ಟಿಗೆ ವಾಸಿಸುತ್ತಿದ್ದ. ನಂತರ ಮದುವೆಯಾಗಬೇಕಾದರೆ ನೀನು ಇಸ್ಲಾಂಗೆ ಮತಾಂತರವಾಗಬೇಕು ಎಂದು ಆಕೆಗೆ ಪದೇ ಪದೇ ಮಾನಸಿಕವಾಗಿ ಪೀಡಿಸುತ್ತಿದ್ದ’ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು 23 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ.

    Post Views: 281

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.