Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹಣ ದ್ವಿಗುಣ ಮಾಡುವ ಆಮಿಷ- 30.90 ಲಕ್ಷ ರೂ. ವಂಚನೆ!! ನಾಲ್ವರ ವಿರುದ್ಧ FIR
    ಇತ್ತೀಚಿನ ಸುದ್ದಿ

    ಉಡುಪಿ: ಹಣ ದ್ವಿಗುಣ ಮಾಡುವ ಆಮಿಷ- 30.90 ಲಕ್ಷ ರೂ. ವಂಚನೆ!! ನಾಲ್ವರ ವಿರುದ್ಧ FIR

    July 4, 2026
    Share

    ಉಡುಪಿ : ಹಣ ಹೂಡಿಕೆ ಮಾಡಿದರೆ ದ್ವಿಗುಣ ಲಾಭ ದೊರೆಯುತ್ತದೆ ಎಂದು ನಂಬಿಸಿ 30.90 ಲಕ್ಷ ರೂ. ವಂಚನೆ ಎಸಗಿದ ಆರೋಪದಡಿ ನಾಲ್ವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪ್ರದೀಪ ಆಚಾರ್ಯ, ಜ್ಯೋತಿ ಜತ್ತನ್, ದಮಯಂತಿ ಎ. ಹಾಗೂ ರೋಹಿಣಿ ಎಂಬವರು 2026ರ ಜೂನ್ 19ರಂದು ಕೋಡಿ ಗ್ರಾಮದ ಇಂದಿರಾ ಬಂಗೇರ ಅವರ ಮನೆಗೆ ಭೇಟಿ ನೀಡಿ, ಮಲ್ಪೆಯ ಕಾರ್ತಿಕ್ ಸಹಜ್ ಕಟ್ಟಡದಲ್ಲಿರುವ ಬಿ.ಜಿ. ವೆಲ್ತ್ ಶೇರಿಂಗ್ ಸಂಸ್ಥೆಯ ಮೂಲಕ ಷೇರು ಮಾರುಕಟ್ಟೆ ವ್ಯವಹಾರ ನಡೆಸುತ್ತಿರುವುದಾಗಿ ಪರಿಚಯಿಸಿಕೊಂಡಿದ್ದಾರೆ.

    ತಮ್ಮ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣವಾಗುತ್ತದೆ. ಇದು ವಿದೇಶಿ ಕಂಪನಿಯಾಗಿದ್ದು, ಒಮ್ಮೆ ಮಾತ್ರ ಹೂಡಿಕೆ ಮಾಡಿದರೆ ಡಾಲರ್ ರೂಪದಲ್ಲಿ ಐಡಿ ತೆರೆದು ಹೂಡಿಕೆ ಮಾಡಲಾಗುತ್ತದೆ ಎಂದು ನಂಬಿಸಿದ್ದಾರೆ ಎನ್ನಲಾಗಿದೆ. ಈ ಮಾತುಗಳನ್ನು ನಂಬಿದ ಇಂದಿರಾ ಬಂಗೇರ, ಅವರ ಕುಟುಂಬ ಸದಸ್ಯರು ಹಾಗೂ ಇತರರು ಒಟ್ಟು 30.90 ಲಕ್ಷ ರೂ. ಹಣವನ್ನು ಹೂಡಿಕೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಆದರೆ, ಬಳಿಕ ಹೂಡಿಕೆ ಮಾಡಿದ ಹಣವನ್ನು ಹಿಂದಿರುಗಿಸದೆ, ಸಂಸ್ಥೆಯ ಕಚೇರಿಯನ್ನು ಮುಚ್ಚಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರದೀಪ್ ಆಚಾರ್ಯ ಈ ಹಿಂದೆ ಮಂಗಳೂರು ಸೇರಿದಂತೆ ಕೆಲವು ಕಡೆ ಹೂಡಿಕೆ ಹೆಸರಿನಲ್ಲಿ ಜನರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದಾನೆ ಎಂದು ಆರೋಪ ಇದೆ. ಮಂಗಳೂರಿನಲ್ಲಿ ಕೊಡ ಈತನ ವಿರುದ್ಧ  ಪ್ರಕರಣ ದಾಖಲಾಗಿತ್ತು‌ ಎನ್ನಲಾಗಿದೆ.

    ಈ ಮೂಲಕ ದೂರುದಾರರು ಹಾಗೂ ಇತರರಿಗೆ ನಂಬಿಕೆದ್ರೋಹ ಮತ್ತು ವಂಚನೆ ಎಸಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

    ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Post Views: 148

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.