Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ 2 ಕೋ. ರೂ. ಕಳೆದುಕೊಂಡ ವ್ಯಕ್ತಿ
    ಇತ್ತೀಚಿನ ಸುದ್ದಿ

    ಮಂಗಳೂರು: ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ 2 ಕೋ. ರೂ. ಕಳೆದುಕೊಂಡ ವ್ಯಕ್ತಿ

    November 12, 2025
    Share

    ಮಂಗಳೂರು : ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಗಳಿಸಬಹುದು ಎಂದು ಆಮಿಷವೊಡ್ಡಿ 2 ಕೋ.ರೂ. ವಂಚನೆ ಮಾಡಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅಪರಿಚಿತ ವ್ಯಕ್ತಿಯೊಬ್ಬ 2022ರ ಮೇ 1ರಂದು ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿ ತಾನು ಡೆಲ್ಟಿನ್ ರೋಯಲ್ ಕಂಪನಿಯ ಅಂಕಿತ್ ಎಂದು ಪರಿಚಯಿಸಿಕೊಂಡಿದ್ದ. ಆ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ಹಾಗೂ ಲಾಭಾಂಶವನ್ನು ನೀಡುವುದಾಗಿ ತಿಳಿಸಿದ್ದ. ಅಲ್ಲದೆ ಸುಮಿತ್ ಜೈಸ್ವಾಲ್, ಕುಶಾಗರ್ ಜೈನ್, ಅಖಿಲ್ ಎಂಬುವರ ಪರಿಚಯವನ್ನೂ ಮಾಡಿದ್ದ. ಇದನ್ನೆಲ್ಲಾ ನಂಬಿದ ತಾನು 2022ರ ಮೇ 1ರಂದು 3,500 ರೂ. ಅಂಕಿತ್ ನೀಡಿದ ಅಪರಿಚಿತ ವ್ಯಕ್ತಿಯ ಸ್ಕ್ಯಾನರ್ ಮೂಲಕ ಫೆಡರಲ್ ಬ್ಯಾಂಕ್ ಖಾತೆಯ ಮೂಲಕ ಹಣ ವರ್ಗಾಯಿಸಿದೆ. ಆ ದಿನ ತನಗೆ 1,000 ರೂ. ಲಾಭಾಂಶದ ಹಣವನ್ನು ತನ್ನ ಫೆಡರಲ್ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಬಳಿಕ ತಾನು ಹಂತ ಹಂತವಾಗಿ ಫೆಡರಲ್ ಬ್ಯಾಂಕ್, ಕೆನರಾ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಹಾಗೂ ತನ್ನ ಸಂಬಂಧಿಕರ ಖಾತೆಯಿಂದ 2022ರ ಮೇ ತಿಂಗಳಿಂದ 2025ರ ಆ.29ರವರೆಗೆ 2 ಕೋ.ರೂ.ಗಿಂತಲೂ ಹೆಚ್ಚಿನ ಹಣ ವರ್ಗಾವಣೆ ಮಾಡಿರುವೆ.

    ಕಳೆದ ಮೂರು ತಿಂಗಳಿನಿಂದ ಆರೋಪಿಗಳು ವಾಟ್ಸ್‌ಆ್ಯಪ್ ಮೆಸೇಜ್ ಮತ್ತು ಕರೆ ಮಾಡಿದರೂ ಪ್ರತಿಕ್ರಿಯೆ ನೀಡುತ್ತಿಲ್ಲ. ಇದರಿಂದ ಅನುಮಾನಗೊಂಡು ಅಂಕಿತ್ ಬಳಿ ಕರೆ ಮಾಡಿ ಹಣ ವಾಪಸ್ ನೀಡುವಂತೆ ಕೇಳಿದಾಗ ಕುಶಾಗರ್ ಜೈನ್, ಅಖಿಲ್ ಮತ್ತು ಸುಮಿತ್ ಜೈಸ್ವಾಲ್ ಮೋಸ ಮಾಡಿದ್ದಾರೆ ಎಂದು ನೆಪ ಹೇಳಿದ್ದಾನೆ ಎಂದು ಹಣ ಕಳಕೊಂಡ ವ್ಯಕ್ತಿ ದೂರಿನಲ್ಲಿ ವಿವರಿಸಿದ್ದಾರೆ. ಬಳಿಕ ವಾಟ್ಸ್‌ಆ್ಯಪ್ ಮೂಲಕ ಕರೆ ಮಾಡಿದ ಆರೋಪಿಗಳು ಹೂಡಿಕೆ ಮಾಡಿದ ಯಾವುದೇ ಹಣ ಹಿಂದಿರುಗಿಸುವುದಿಲ್ಲ. ಈ ಬಗ್ಗೆ ದೂರು ನೀಡಿದರೆ ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    Post Views: 142

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.