Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರು ದಕ್ಷತೆಯಿಂದ ಕೆಲಸ ಮಾಡಿದರೇ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ: ಸಿಎಂ ಸಿದ್ಧರಾಮಯ್ಯ
    ಇತ್ತೀಚಿನ ಸುದ್ದಿ

    ಪೊಲೀಸರು ದಕ್ಷತೆಯಿಂದ ಕೆಲಸ ಮಾಡಿದರೇ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ: ಸಿಎಂ ಸಿದ್ಧರಾಮಯ್ಯ

    April 2, 2025
    Share

    ಬೆಂಗಳೂರು: ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಪೊಲೀಸ್‌ ಇಲಾಖೆ ಮಹತ್ತರವಾದ ಪಾತ್ರ ವಹಿಸುತ್ತದೆ. ಪೊಲೀಸ್‌ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಿದರೆ ಅಪರಾಧಗಳು ಕಡಿಮೆಯಾಗುತ್ತದೆ. ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

    ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು.ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

    ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು.

    ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಕರೆ ನೀಡಿದರು.

    ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಕರೆ ನೀಡಿದರು.

    ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು ಎಂದರು.

    ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು ಎಂದರು.

    ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಗೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಂತಿ ಪಾಲನೆ ಉತ್ತಮವಾಗಿರಬೇಕು ಎಂದರು.

    ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಅಪಾರ ಮೆಚ್ಚುಗೆಯ ವಿಷಯ ಎಂದರು.

    ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ದ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದರು.

    ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ದವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದರು.

    ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

    Post Views: 378

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.