ಮಂಗಳೂರು : ಮೂರು ಕಳವು ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಲಯಕ್ಕೆ ಹಾಜರಾಗದೆ 12 ತಲೆಮರೆಸಿಕೊಂಡ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕೋನಾಲು ನಿವಾಸಿ ಅಬ್ದುಲ್ ಹಮೀದ್(50) ಬಂಧಿತ ಆರೋಪಿ. 1999ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ 2012ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 3 ಕಳವಯ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಬ್ದುಲ್ ಹಮೀದ್ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ. ಆ ಬಳಿಕ ವಿಚಾರಣೆಗೆ ಹಾಜರಾಗದೇ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಧರ್ಮಸ್ಥಳದ ಬಳಿಯಲ್ಲಿ ವಶಕ್ಕೆ ದಸ್ತಗಿರಿ ಮಾಡುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಆತನನ್ನು ಮುಂದಿನ ಕ್ರಮಕ್ಕಾಗಿ ಸಿಸಿಬಿ ಪೊಲೀಸರು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದೆ.
