Facebook Twitter Instagram
    Wednesday, August 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಬಂಧನ

    August 12, 2026
    Share

    ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರು ಪ್ರದೇಶದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ 26 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಆ. 4 ರಂದು ಮನೆಯವರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿಗೆ ಅಳವಡಿಸಿದ್ದ ಬೀಗವನ್ನು ಆಯುಧದಿಂದ ಮುರಿದು ಒಳನುಗ್ಗಿ, ಕಪಾಟಿನಲ್ಲಿದ್ದ 14 ಗ್ರಾಂ ಚಿನ್ನದ ಸರ, ತಲಾ 2 ಗ್ರಾಂ ತೂಕದ ಎರಡು ಉಂಗುರಗಳು ಹಾಗೂ ₹25,000 ನಗದು ಹಣವನ್ನು ಕಳವು ಮಾಡಿದ್ದರು. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ. 106/2026, ಕಲಂ 305(a), 331(3) ಬಿ.ಎನ್.ಎಸ್. ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತನಿಖೆ ಮುಂದುವರಿದ ಸಂದರ್ಭದಲ್ಲಿ ಆ. 11ರಂದು ನಗರದ ತಲಪಾಡಿ ಬಸ್‌ಸ್ಟ್ಯಾಂಡ್ ಬಳಿ ಆರೋಪಿ ಇರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

    ಬಂಧಿತ ಆರೋಪಿಯನ್ನು ಸಮಧನ ಸಕಹರಿ ನರಳೆ (26) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವು ಮಾಡಲಾದ ಸೊತ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 1

    Related Posts

    ಸುರತ್ಕಲ್ ದೈವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ- ಆರೋಪಿ ಬಂಧನ

    August 12, 2026

    ಲಾಭಾಂಶದ ಆಸೆಗೆ ಆನ್‌ಲೈನ್‌ನಲ್ಲಿ ಹೂಡಿಕೆ: ವ್ಯಕ್ತಿಗೆ 32 ಲಕ್ಷ ರೂ. ಪಂಗನಾಮ

    August 12, 2026

    ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸರಗಳ್ಳನ 45 ದಿನಗಳ ಬಳಿಕ ಬಂಧನ

    August 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಬಂಧನ

    August 12, 2026

    ಸುರತ್ಕಲ್ ದೈವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ- ಆರೋಪಿ ಬಂಧನ

    August 12, 2026

    ಲಾಭಾಂಶದ ಆಸೆಗೆ ಆನ್‌ಲೈನ್‌ನಲ್ಲಿ ಹೂಡಿಕೆ: ವ್ಯಕ್ತಿಗೆ 32 ಲಕ್ಷ ರೂ. ಪಂಗನಾಮ

    August 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.