Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಗುವಿನ ಕುತ್ತಿಗೆಯಿಂದ ಸರ ಕಳ್ಳತನ ಪ್ರಕರಣ- ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಮಗುವಿನ ಕುತ್ತಿಗೆಯಿಂದ ಸರ ಕಳ್ಳತನ ಪ್ರಕರಣ- ಆರೋಪಿ ಬಂಧನ

    September 13, 2025
    Share

    ಮಂಗಳೂರು: ಉಳ್ಳಾಲ ತಾಲೂಕು ಬೆಳ್ಳ ಗ್ರಾಮ ವಾಸಿ ಶ್ರೀಮತಿ ರಹಮತ್ ಎಂಬವರು ತನ್ನ ಮಕ್ಕಳೊಂದಿಗೆ ಜು. 02 ರಂದು ತೊಕ್ಕೊಟ್ಟು ಗ್ರಾಮದಲ್ಲಿರುವ ಸಾಗರ ಕಲೆಕ್ಷನ್ ಅಂಗಡಿಗೆ ತನ್ನ ಮಕ್ಕಳೊಂದಿಗೆ ಬಟ್ಟೆ ಖರೀದಿಸಲು ಹೋಗುತ್ತಿದ್ದಾಗ ಮಳೆ ಬಂದ ಕಾರಣ ಸ್ಟ್ರೀಟ್ ಪ್ಯಾಲೇಸ್ ಬೇಕರಿಯ ಮುಂದೆ ನಿಂತುಕೊಂಡಿದ್ದಾಗ ತನ್ನ ಮಗಳ ಕುತ್ತಿಗೆಯಲ್ಲಿದ್ದ 10 ಗ್ರಾಂ ಚಿನ್ನದ ಸರವನ್ನು ಯಾರೋ ಬುರ್ಖಾ ಧರಿಸಿದ್ದ ಹೆಂಗಸು ಕಿತ್ತುಕೊಂಡು ಹೋಗಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣಾ ಮೊ. ನಂ 8/2025 ಕಲಂ: 304(2) ಬಿ ಎನ್ ಎಸ್ 2023 ರಲ್ಲಿ ಪ್ರಕರಣ ದಾಖಲಾಗಿರುತ್ತದೆ.

    ಈ ಬಗ್ಗೆ ಆರೋಪಿ ಹಾಗೂ ಸೊತ್ತು ಪತ್ತೆಯ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಪ್ರಕರಣವನ್ನು ಬೇಧಿಸಿ ಮಾಹಿತಿಯ ಆಧಾರದ ಮೇಲೆ ಆರೋಪಿತೆಯಾದ ಉಳ್ಳಾಲದ ನಿವಾಸಿ ಶ್ರೀಮತಿ ಮಿನ್ನತ್ ಎಂಬಾಕೆಯನ್ನು ದಿನಾಂಕ: 12-09-2025 ರಂದು ವಶಕ್ಕೆ ಪಡೆದು ಸುಲಿಗೆ ಮಾಡಿದ 10ಗ್ರಾಂ ಚಿನ್ನದ ಸರವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.ಆರೋಪಿತೆಯ ವಿಚಾರಣೆ ಸಮಯದಲ್ಲಿ ದಿನಾಂಕ 09-07-2025 ರಂದು ಪಜೀ‌ರ್ ಎಂಬಲ್ಲಿರುವ ಕೆ.ಎಮ್.ಎಸ್ ಕನ್ವೇನ್ ಹಾಲ್ ಗೆ ಮದುವೆ ಕಾರ್ಯಕ್ರಮದಲ್ಲಿ ಬ್ಯಾಗಿನಿಂದ 8 ಗ್ರಾಂ ತೂಕದ ಚಿನ್ನದ ಸರವನ್ನು ಕೂಡಾ ಕಳವು ಮಾಡಿರುವುದಾಗಿ ತಿಳಿಸಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 107/2025 ಕಲಂ 303(2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದ್ದು, ಸದ್ರಿ ಚಿನ್ನದ ಸರವನ್ನು ಸಹ ಈ ದಿನ ಅಮಾನತ್ತು ಪಡಿಸಲಾಗಿರುತ್ತದೆ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಆರೋಪಿತೆ ಶ್ರೀಮತಿ ಮಿನ್ನತ್ ಎಂಬಾಕೆಯಿಂದ ಸುಲಿಗೆಯಾಗಿದ್ದ ಸುಮಾರು 10 ಗ್ರಾಂ ತೂಕದ ಚಿನ್ನದ ಸರ ಸುಮಾರು 8 ಗ್ರಾಂ ತೂಕದ ಚಿನ್ನದ ಸರವನ್ನು (ಒಟ್ಟು ಮೌಲ್ಯ ರೂ 1,80,000/-) ವಶಪಡಿಸಿಕೊಂಡು ಆರೋಪಿತೆಯ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಂಡು ತನಿಖೆಗ ನಡೆಸಲಾಗುತ್ತಿದೆ. ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

    Post Views: 209

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.