Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಾಹನ ಬ್ಯಾಟರಿ ಕಳವು- ಆರೋಪಿಗಳ ಬಂಧನ..!
    ಇತ್ತೀಚಿನ ಸುದ್ದಿ

    ಮಂಗಳೂರು: ವಾಹನ ಬ್ಯಾಟರಿ ಕಳವು- ಆರೋಪಿಗಳ ಬಂಧನ..!

    August 9, 2023
    Share

    ಮಂಗಳೂರು: ಮಂಗಳೂರು ಹೊರವಲಯದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಿಲ್ಲಿಸಲಾಗುತ್ತಿದ್ದ ವಾಹನಗಳ ಬ್ಯಾಟರಿಗಳನ್ನು ಕಳವು ಗೈಯುತ್ತಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು , ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಮೂಡುಪೆರಾರ ಈಶ್ವರ ಕಟ್ಟೆ ಮಿತ್ತ ಕೊಳಪಿಲದ ನಿವಾಸಿಯಾಗಿರುವ  ಪ್ರತಾಪ್‌  (20)ಮತ್ತು ಕಂದಾವರ ಚರ್ಚ್‌ ರಸ್ತೆಯ ನಿವಾಸಿ ಅನಿಲ್‌ ಯಾನೆ ಅನೀ (23) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ.

    ಬಜಪೆ ಠಾಣೆ ವ್ಯಾಪ್ತಿಯ ಅಡ್ಡೂರು, ಕೈಕಂಬ ಮತ್ತು ಗುರುಪುರ ಪರಿಸರಗಳಲ್ಲಿ ನಿಲ್ಲಿಸಿದ್ದ ಟಿಪ್ಪರ್‌ ಲಾರಿ, ಜೆಸಿಬಿ ಮತ್ತು ಇತರ ವಾಹನಗಳಿಂದ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಬಜಪೆ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

    ತನಿಖೆ ಆರಂಭಿಸಿದ ಪೊಲೀಸ್‌ ನಿರೀಕ್ಷಕ ಪ್ರಕಾಶ ಅವರ ತಂಡ ಮಂಗಳವಾರ ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದ ಕಲದಲ್ಲಿ ಕಳವುಗೈದ ಬ್ಯಾಟರಿಗಳನ್ನು ಮಾರಾಟ ಮಾಡಲು ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿ  ಆರೋಪಿಗಳನ್ನು  ಬಂಧಿಸಿದ್ದಾರೆ.

    ಈ ವೇಳೆ  ಸುಮಾರು 4 ಲಕ್ಷ ರೂ. ಮೌಲ್ಯದ ಕಾರು ಮತ್ತು 1.50 ಲಕ್ಷ ರೂ. ಮೌಲ್ಯದ ಒಟ್ಟು 17 ಆಮರಾನ್‌ ಕಂಪೆನಿಯ ಬ್ಯಾಟರಿಗಳನ್ನು ಸ್ವಾ ಧೀನಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಬಜಪೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

    Post Views: 191

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.