Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
    ಇತ್ತೀಚಿನ ಸುದ್ದಿ

    ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ

    February 8, 2024
    Share

    ಕಾರ್ಕಳ: ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಬಗ್ಗೆ ಫೆ.06ರ ಮಂಗಳವಾರ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ.

    ಪರಶುರಾಮ ಥೀಮ್ ಪಾರ್ಕ್ ಮೋಸದ ವಿಚಾರವಾಗಿ ಅನೇಕ ಹೋರಾಟಗಳು ಪ್ರತಿಭಟನೆಗಳು ನಡೆದಿದ್ದವು. ಇತ್ತೀಚೆಗೆ ಈ ವಿಚಾರವನ್ನು ಕಾರ್ಕಳ ಕಾಂಗ್ರೆಸ್ ನ ಕಾರ್ಯಕರ್ತರು ಹಾಗೂ ಇತರ ಹಲವು ಸಾಮಾಜಿಕ ಕಾರ್ಯಕರ್ತರು ಮತ್ತೆ ಈ ಹಗರಣದ ಬಗ್ಗೆ ದ್ವನಿ ಎತ್ತಿದ್ದರು. ಇದರ ಬೆನ್ನಲ್ಲೇ ಸಿಎಂ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆಪರಶುರಾಮ ಥೀಮ್ ಪಾರ್ಕ್ ಒಟ್ಟಾರೆ 11.54 ಕೋಟಿ ರೂಗಳ ಯೋಜನೆಯಾಗಿದ್ದು ಅದರಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪರಶುರಾಮ ನ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಮಾಡುವುದೆಂದು ನಿರ್ಧಾರ ಆಗಿತ್ತು. ಕಂಗೇರಿಯ ಪ್ರತಿಮೆ ತಯಾರಿ ಸಂಸ್ಥೆಯೊಂದಕ್ಕೆ ಇದರ ಕಾಂಟ್ರಾಕ್ಟ್ ನೀಡಲಾಗಿತ್ತು. ರಾಜ್ಯ ಚುನಾವಣೆ ಹೊಸ್ತಿಲಲ್ಲಿ ಅಂದಿನ ಬಿಜೆಪಿ ಸರ್ಕಾರ ಜನವರಿ 27ರಂದು ಥೀಮ್‌ ಪಾರ್ಕ್ ಉದ್ಘಾಟಿಸಿತ್ತು. ಅಲ್ಲಿ ನಿರ್ಮಿಸಲಾಗಿರುವ ಪರಶುರಾಮನ ಕಂಚಿನ ಪ್ರತಿಮೆಯ ಉದ್ದ 33 ಅಡಿ, ತೂಕ 15 ಟನ್ ಎಂದು ಪ್ರಚಾರ ಮಾಡಲಾಗಿತ್ತು. ಕೊನೆಗೆ ಕಂಚಿನ ಪ್ರತಿಮೆ ಎಂದು ಪ್ರಚಾರ ನೀಡಲಾದ ಪ್ರತಿಮೆ ‘ಫೈಬರ್‌’ನಿಂದ ನಿರ್ಮಿಸಲ್ಪಟ್ಟಿದೆ ಎಂಬುದು ಬೆಳಕಿಗೆ ಬಂದಿತ್ತು. ಅಲ್ಲದೆ ಚುನಾವಣಾ ಫಲಿತಾಂಶ ಬಂದ ಬಳಿಕ ಪರಶುರಾಮನ ಪ್ರತಿಮೆಯನ್ನು ರಾತ್ರೋರಾತ್ರಿ ಮಾಯಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ಬಗ್ಗೆ ಅನೇಕ ಪ್ರತಿಭಟನೆಗಳು ನಡೆದಿದ್ದವು.

    Post Views: 243

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.