Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಮಂತ್ರಣ ಪತ್ರ ಕೊಡಲು ಹೋದ ಕುಟುಂಬಕ್ಕೆ ಶಾಕ್: ಮನೆಗೆ ನುಗ್ಗಿದ ಕಳ್ಳರು
    ಇತ್ತೀಚಿನ ಸುದ್ದಿ

    ಆಮಂತ್ರಣ ಪತ್ರ ಕೊಡಲು ಹೋದ ಕುಟುಂಬಕ್ಕೆ ಶಾಕ್: ಮನೆಗೆ ನುಗ್ಗಿದ ಕಳ್ಳರು

    May 6, 2026
    Share

    ನೆಲಮಂಗಲ: ಮಗಳ ಮದುವೆ ತಯಾರಿಯಲ್ಲಿದ್ದ ಕುಟುಂಬವೊಂದು ಆಮಂತ್ರಣಪತ್ರ ಕೊಡಲು ಪರವೂರಿಗೆ ಹೋಗಿಬರುವುದರ ಒಳಗೆ ವಿವಾಹಕ್ಕೆಂದು ಮಾಡಿಸಿಟ್ಟ ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ  ನೆಲಮಂಗಲ ಬಳಿಯ ದಾಸನಪುರದ ಮುನೇಶ್ವರ ಬಡಾವಣೆಯಲ್ಲಿ ನಡೆದಿದೆ. ಶಿವ ಮತ್ತು ಲೋಕೇಶ್ವರಿ ಎಂಬುವವರ ಮನೆಯ ಡೋರ್ ಒಡೆದು ಒಳ ನುಗ್ಗಿರುವ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ, ನಗದು ದೋಚಿ ಎಸ್ಕೇಪ್​​ ಆಗಿದ್ದಾರೆ.

    ತಮಿಳುನಾಡಿನ ಮೂಲವರಾದ ಲೋಕೇಶ್ವರಿ ಹಾಗೂ ಶಿವ ಎಂಬವರು ಸಾಕಷ್ಟು ವರ್ಷದಿಂದ ನೆಲಮಂಗಲದಲ್ಲಿ ನೆಲೆಸಿ ತಮ್ಮ ಜೀವನ ಕಟ್ಟುಕೊಂಡಿದ್ದರು. ಕೂಲಿ ನಾಲಿ ಮಾಡಿ ಜೀವನ ನಡೆಸುತ್ತಿದ್ದ ಇವರು ತಮ್ಮ ಮೂರನೇ ಮಗಳಾದ ಶಂಕರಿ ಮದುವೆ ತಯಾರಿಯಲ್ಲಿದ್ದರು. ಈ ಹಿನ್ನೆಲೆ ಕೂಡಿಟ್ಟ ಹಣದ ಜೊತೆಗೆ ಸಾಲ ಮಾಡಿ ಮಗಳಿಗೆ ಚಿನ್ನಾಭರಣ ತಂದಿದ್ದರು. ಈ ನಡುವೆ ಮದುವೆ ಆಮಂತ್ರಣ ಪತ್ರಿಕೆಯನ್ನ ವರನ ಮನೆಯವರಿಗೆ ಕೊಡಲೆಂದು ತಮಿಳುನಾಡಿಗೆ ಹೋಗಿ ಬರುವುದರ ಒಳಗೆ ಅವು ಕಳ್ಳರಪಾಲಾಗಿವೆ. ವಧುವಿಗೆಂದು ಖರೀದಿಸಿದ್ದ ನೆಕ್ಲೆಸ್, ಕಿವಿ ಓಲೆ, ಸೇರಿದಂತೆ 60 ಗ್ರಾಂಗಳಿಗೂ ಅಧಿಕ ಒಡವೆ ಮನೆಯಲ್ಲಿತ್ತು ಎನ್ನಲಾಗಿದೆ.

    ಮಗಳ ಮದುವೆಯನ್ನು ಸಡಗರದಿಂದ ಮಾಡಬೇಕೆಂಬ ಆಸೆಯಲ್ಲಿದ್ದ ಕುಟುಂಬಕ್ಕೆ ಈ ಘಟನೆ ಭಾರಿ ಆಘಾತ ತಂದಿದ್ದು, ವಿವಾಹ ನೆರವೇರಿಸೋದು ಹೇಗೆಂಬ ಆತಂಕ ಕಾಡತೊಡಗಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೀಘ್ರ ಕಳ್ಳರನ್ನು ಪತ್ತೆ ಮಾಡಿ ತಮ್ಮ ಬಂಗಾರ ಮರಳಿ ಸಿಗುವಂತೆ ಮಾಡಿ ಎಂದು ಕುಟುಂಬ ಅಂಗಲಾಚಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕೂಡ ಬಲೆ ಬೀಸಿದ್ದಾರೆ. ಘಟನೆಯಿಂದ ಸ್ಥಳೀಯರೂ ಬೆಚ್ಚಿಬಿದ್ದಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಆತಂಕ ಮನೆ ಮಾಡಿದೆ.

    Post Views: 150

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.