ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯ ಬಂಧನದ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಗುರುವಾರ ಉಡುಪಿ ಜಿಲ್ಲೆಯ ಪೊಲೀಸರು ಧರ್ಮಸ್ಥಳಕ್ಕೆ ತೆರಳಿ ವಶಕ್ಕೆ ಬಂಧಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದು, ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಜಾಮೀನು ರಹಿತ ಪ್ರಕರಣವಿದೆ.
ಇಲಾಖೆಯಿಂದ ನೀಡಿದ ಎರಡು ನೋಟಿಸ್‌ಗೆ ಉತ್ತರ ನೀಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿ ಇರಲಿಲ್ಲ. ಈತ ಪುನರಾವರ್ತಿತ ಆರೋಪಿ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಇದೀಗ ಅವರ ವಕೀಲರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಠಾಣೆಯ ಸುತ್ತ ಬಿಗಿ ಬಂದೋಬಸ್ತು ಏರ್ಪಡಿಸಲಾಗಿದೆ.




